ಟ್ರಾಫಿಕ್ ಪೊಲೀಸರಿಂದ ನಿತ್ಯ ಕಿರುಕುಳ ಆರೋಪ- ಕಬಕ ಗ್ರಾಮಸ್ಥರಿಂದ ಶಾಸಕರಿಗೆ ದೂರು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 28. ಪುತ್ತೂರು ಟ್ರಾಫಿಕ್ ಪೊಲೀಸರಿಂದ ಸಾರ್ವಜನಿಕರಿಗೆ ನಿತ್ಯ ಕಿರುಕುಳ ಉಂಟಾಗುತ್ತಿದ್ದು ಇದರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸ್ಥಳೀಯ ಮುಂದಾಳು ಮೋಹನ್ ಗುರ್ಜಿನಡ್ಕ ನೇತೃತ್ವದಲ್ಲಿ ಕಬಕದ ಸಾರ್ವಜನಿಕರ ನಿಯೋಗವೊಂದು ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಿದೆ.

ಪ್ರತೀ ದಿನ ಬೆಳಿಗ್ಗೆ 8.30ರ ವೇಳೆಗೆ ಕಬಕಕ್ಕೆ ಬರುವ ಟ್ರಾಫಿಕ್ ಪೊಲೀಸರು ವಾಹನ ತಪಾಸಣೆಯ ಕಾರಣವಿಟ್ಟು ಬೈಕ್ ಸವಾರರಿಗೆ ತೊಂದರೆ ನೀಡುತ್ತಿದ್ದಾರೆ. ಪೋಷಕರು ಬೆಳಗ್ಗೆ ಶಾಲಾ ಮಕ್ಕಳನ್ನು ಬಸ್ಸಿಗೆ ಬಿಡಲು ಬೈಕಿನಲ್ಲಿ ಕೂರಿಸಿಕೊಂಡು ಬರುವಾಗಲೂ ಅಡ್ಡಗಟ್ಟುವ ಪೊಲೀಸರು ಮಕ್ಕಳಿಗೆ ಹೆಲ್ಮೆಟ್ ಇಲ್ಲ ಎಂದು ಹೇಳಿ 500 ದಂಡ ವಿಧಿಸುತ್ತಿದ್ದಾರೆ. ಇದರಿಂದ ಶಾಲಾ ಮಕ್ಕಳು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆಯುಂಟಾಗುತ್ತಿದೆ. ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮತ್ತು ಸಾರ್ವಜನಿಕರಿಗೆ ವಿನಾ ಕಾರಣ ತೊಂದರೆ ನೀಡದಂತೆ ಸೂಚನೆ ನೀಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

Also Read  ವಿಧಾನಪರಿಷತ್ ಘರ್ಷಣೆಗೆ ಕಾರಣದ ಬಗ್ಗೆ ಚರ್ಚೆಯಾಗಬೇಕು ➤ ಮಾಜಿ ಸಚಿವ ರಮಾನಾಥ ರೈ

Nk

error: Content is protected !!
Scroll to Top