ವಾಲ್ಮಿಕಿ ನಿಗಮ ಹಗರಣ ಪ್ರಕರಣ ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆ ಮೇಲೆ ದಾಳಿ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಆ. 28. ವಾಲ್ಮಿಕಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರ ಆಪ್ತರ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರಿನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ. ಬಳ್ಳಾರಿಯ ವಿವಿಧೆಡೆ ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆಗಳ ಮೇಲೆ ಮತ್ತೊಮ್ಮೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದಲ್ಲಿ ಇಡಿ ಜಾರ್ಜ್​​ಶೀಟ್ ಸಲ್ಲಿಕೆಗೆ ಸಮಯ ಹತ್ತಿರ ಬಂದಿರುವುದರಿಂದ ಅಧಿಕಾರಿಗಳು ದಾಳಿ ಚುರುಕುಗೊಳಿಸಿದ್ದಾರೆ ಎನ್ನಲಾಗಿದೆ.

Also Read  ಅನಧಿಕೃತ ಜಾಹೀರಾತು ಫಲಕ ತೆರವು, ಸಭೆ ಸಮಾರಂಭಗಳ ಮೇಲೆ ನಿಗಾ ➤ ದ.ಕ. ಜಿಲ್ಲಾಧಿಕಾರಿ ಸೂಚನೆ

 

error: Content is protected !!
Scroll to Top