ದರ್ಶನ್ ಗೆ ರಾಜಾತಿಥ್ಯ ಪ್ರಕರಣ – ಕಾರಾಗೃಹ ಡಿಐಜಿ ಯಾಗಿ ದಿವ್ಯಶ್ರೀ ನೇಮಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 28. ನೂತನ ಕಾರಾಗೃಹ ಡಿಐಜಿಯಾಗಿ ದಿವ್ಯಶ್ರೀ ಹಾಗೂ ಕೇಂದ್ರ ಕಾರಾಗೃಹ ಮುಖ್ಯ ಅಧೀಕ್ಷಕರಾಗಿ ಕೆ.ಸುರೇಶ್ ಎಂಬವರನ್ನು ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

Nk

ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ ಆರೋಪಕ್ಕೆ ಸಂಬಂಧಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಸರಕಾರ ಪರಪ್ಪನ ಅಗ್ರಹಾರದಲ್ಲಿನ ಅಧಿಕಾರಿಗಳನ್ನು ಅಮಾನತು ಮಾಡಿತ್ತು. ಇದರ ಬೆನ್ನಲ್ಲೇ ಕಾರಾಗೃಹ ಡಿಐಜಿ ಸೋಮಶೇಖರ್ ಜಾಗಕ್ಕೆ ಮೈಸೂರು ಕಾರಾಗೃಹ ಅಕಾಡೆಮಿ ಡಿಐಜಿಯಾಗಿದ್ದ ದಿವ್ಯಶ್ರೀ ಅವರನ್ನು ಹಾಗೂ ಕೇಂದ್ರ ಕಾರಾಗೃಹ ಮುಖ್ಯ ಅಧೀಕ್ಷಕರಾಗಿದ್ದ ವಿ.ಶೇಷಮೂರ್ತಿ ಜಾಗಕ್ಕೆ ಕೆ. ಸುರೇಶ್ ಅವರನ್ನು ನೇಮಿಸಿ ಸರಕಾರ ಆದೇಶಿಸಿದೆ.

Also Read  ಕಾಣಿಯೂರು: ಬೆಳಂದೂರಿನಲ್ಲಿ ಸೆ.14 ರಂದು ಉಚಿತ ಕೋವಿಡ್‌ ಟೆಸ್ಟ್

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕೆಐಎಸ್‍ಎಫ್ (ಕರ್ನಾಟಕ ಕೈಗಾರಿಕ ಭದ್ರತಾ ದಳ ಇಲಾಖೆ) ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದ್ದು, ಅವರ ಅನುಮತಿ ಪಡೆದು ಜೈಲಿನ ಆವರಣಕ್ಕೆ ಪ್ರವೇಶಿಸಬೇಕಾಗಿದೆ. ಇನ್ನು ಕೇಂದ್ರ ಕಾರಾಗೃಹ ಭದ್ರತೆಗಾಗಿ ಓರ್ವ ಅಸಿಸ್ಟೆಂಟ್ ಕಮಾಂಡೆಂಟ್, ಇಬ್ಬರು ಇನ್‍ಸ್ಪೆಕ್ಟರ್ ಗಳು ಸೇರಿದಂತೆ ನೂರಕ್ಕೂ ಹೆಚ್ಚು ಸಿಬ್ಬಂದಿಗಳ ನೇಮಕ ಮಾಡಲಾಗಿದೆ.

error: Content is protected !!
Scroll to Top