ಉಪನ್ಯಾಸಕರ ನೇಮಕಾತಿ ಮತ್ತು ವಿಶ್ವವಿದ್ಯಾನಿಲಯದ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹ  ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಆ. 28. ಕಾಲೇಜು ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ, ಪದವಿ ಕಾಲೇಜುಗಳಿಗೆ ಉಪನ್ಯಾಸಕರ ನೇಮಕಾತಿ ಮತ್ತು ವಿಶ್ವವಿದ್ಯಾನಿಲಯದ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಿ ಕುಂದಾಪುರದಲ್ಲಿ ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿತು.

ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ 188 ಕಾಲೇಜುಗಳಲ್ಲಿ 75 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ನಡೆಸುತ್ತಿದ್ದು, ವಿಶ್ವವಿದ್ಯಾನಿಲಯವು ಇಂದು ಸಮಸ್ಯೆಗಳ ಗೂಡಾಗಿದೆ. ಈಗಾಗಲೇ ರಾಜ್ಯದೆಲ್ಲೆಡೆ ಪದವಿ ಪೂರ್ವ ಕಾಲೇಜುಗಳ ತರಗತಿಗಳು ಶುರುವಾಗಿ ಎರಡು ತಿಂಗಳು ಕಳೆದಿವೆ. ಪದವಿ ವಿದ್ಯಾರ್ಥಿಗಳಿಗೂ ಸಹ ಈಗಾಗಲೇ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳ ಪರೀಕ್ಷೆಗಳು ಮುಗಿದು ತರಗತಿಗಳು ಪ್ರಾರಂಭವಾಗಿವೆ. ಆದರೆ ಹಾಸ್ಟೆಲ್ ಪ್ರವೇಶಾತಿಗಳು ಪ್ರಾರಂಭವಾಗದೇ ಇರುವುದರಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಈ ಕೂಡಲೇ ಹಾಸ್ಟೆಲ್ ಪ್ರವೇಶಾತಿಯನ್ನು ಆರಂಭಿಸಬೇಕು ಮತ್ತು ಹಾಸ್ಟೇಲ್ ಸೀಟುಗಳನ್ನು ಹೆಚ್ಚಿಸಬೇಕು. ಪ್ರತಿ ವರ್ಷ ಪದವಿ ವಿದ್ಯಾರ್ಥಿಗಳಿಗೆ ಸೂಕ್ತವಾಗಿ ಉಪನ್ಯಾಸಕರಿಲ್ಲದೆ ವಿದ್ಯಾರ್ಥಿಗಳು ಅವರ ತರಗತಿಗಳು ಸಂಪೂರ್ಣವಾಗದೇ ಪರೀಕ್ಷೆಗಳಿಗೆ ಹಾಜರಾಗುವ ಪರಿಸ್ಥಿತಿ ಇದೆ. ಸರ್ಕಾರ ತಡ ಮಾಡದೆ ಕೂಡಲೇ ಉಪನ್ಯಾಸಕರ ಸಂಪೂರ್ಣ ನೇಮಕಾತಿಯನ್ನು ಮಾಡಬೇಕೆಂದು ಉಡುಪಿ ಜಿಲ್ಲಾ ಎಬಿವಿಪಿ ಸಹ ಸಂಚಾಲಕ ದರ್ಶನ್ ಆಗ್ರಹಿಸಿದರು. ಕುಂದಾಪುರದ ಶಾಸ್ತ್ರೀ ವೃತ್ತದಿಂದ ಮೆರವಣಿಗೆಯಲ್ಲಿ ಸಾಗಿದ ಎಬಿವಿಪಿ ವಿದ್ಯಾರ್ಥಿಗಳು, ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಬಳಿಕ ತಹಸೀಲ್ದಾರ್ ಶೋಭಾ ಲಕ್ಷ್ಮೀ ಅವರಿಗೆ ಮನವಿ ಸಲ್ಲಿಸಿ ಪ್ರತಿಭಟನೆ ಹಿಂಪಡೆದರು.

Also Read  ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಕೊರೊನಾ ಸೋಂಕಿಗೆ ಮೃತ್ಯು

error: Content is protected !!
Scroll to Top