ರೇಣುಕಾಸ್ವಾಮಿ ಕೊಲೆ ಪ್ರಕರಣ- ಸೆಪ್ಟೆಂಬರ್ 9ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜೈಲು ಪಾಲಾಗಿರುವ ಆರೋಪಿ ದರ್ಶನ್‌ ಮತ್ತು ಗ್ಯಾಂಗ್‌ ಗೆ ಸೆಪ್ಟೆಂಬರ್‌ 9ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ.

Nk

ನ್ಯಾಯಾಂಗ ಬಂಧನ ಅಂತ್ಯವಾಗಿದ್ದ ಹಿನ್ನೆಲೆ ಇಂದು ವೀಡಿಯೋ ಕಾನ್ಫರೆನ್ಸ್‌ ಮೂಲಕ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಆರೋಪಿಗಳನ್ನು ಪುನಃ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿಕೊಂಡರು. ಮನವಿ ಪುರಸ್ಕರಿಸಿದ 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು ದರ್ಶನ್‌ ಮತ್ತು ಗ್ಯಾಂಗ್‌ ನ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ. ಇದರ ಬೆನ್ನಲ್ಲೇ ದರ್ಶನ್‌ ಅವರನ್ನು ಇಂದು ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಲಾಗುತ್ತದೆ.

Scroll to Top