ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ನಾಳೆಯಿಂದ 4 ದಿನ ಪಾಸ್ ಪೋರ್ಟ್ ಸೇವಾ ಪೋರ್ಟಲ್ ಬಂದ್ – ಪಾಸ್ ಪೋರ್ಟ್ ಇಲಾಖೆ ಆದೇಶ – News Kadaba

ನಾಳೆಯಿಂದ 4 ದಿನ ಪಾಸ್ ಪೋರ್ಟ್ ಸೇವಾ ಪೋರ್ಟಲ್ ಬಂದ್ – ಪಾಸ್ ಪೋರ್ಟ್ ಇಲಾಖೆ ಆದೇಶ

(ನ್ಯೂಸ್ ಕಡಬ) newskadaba.com ಆ. 28. ಟೆಕ್ನಿಕಲ್ ಮೈಂಟೆನೆನ್ಸ್ ಇರುವ ಕಾರಣಕ್ಕೆ ಪಾಸ್​ಪೋರ್ಟ್ ಗೆ ಸಂಬಂಧ ಪಟ್ಟ ಕೆಲಸಗಳಿಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕಲಾಗಿದ್ದು, ನಾಳೆ (ಆ. 29 ಗುರುವಾರ) ಸಂಜೆ 8 ಗಂಟೆಯಿಂದ ಸೆಪ್ಟಂಬರ್ 2ರ ಬೆಳಗ್ಗೆ 6 ಗಂಟೆಯವರೆಗೂ ಪಾಸ್​ಪೋರ್ಟ್ ಸೇವಾ ಪೋರ್ಟಲ್ ಬಂದ್ ಆಗಿರುತ್ತದೆ ಎಂದು ಇಲಾಖೆ ತಿಳಿಸಿದೆ.

Nk

 

ಪೋರ್ಟಲ್​ನ ಟೆಕ್ನಿಕಲ್ ಮೈಂಟೆನೆನ್ಸ್ ಕಾರ್ಯ ನಡೆಯುತ್ತಿರುವುದರಿಂದ ಅದು ಸಾರ್ವಜನಿಕ ಬಳಕೆಗೆ ಲಭ್ಯ ಇರುವುದಿಲ್ಲ. ಹಾಗಾಗಿ ನಾಳೆ ಸಂಜೆ 8ರಿಂದ ಸೆಪ್ಟೆಂಬರ್ 2ರ ಬೆಳಗ್ಗೆ 6ಗಂಟೆಯವರೆಗೂ ಈ ಪೋರ್ಟಲ್​ನಲ್ಲಿ ಯಾವ ಸರ್ವಿಸ್ ಇರುವುದಿಲ್ಲ. ಸದ್ಯ ಆಗಸ್ಟ್ 30ರಂದು ನೀಡಲಾಗಿರುವ ಎಲ್ಲಾ ಅಪಾಯಿಂಟ್ಮೆಂಟ್​ಗಳನ್ನು ರದ್ದು ಮಾಡಲಾಗಿದ್ದು, ಅಪಾಯಿಂಟ್ಮೆಂಟ್ ಪಡೆದಿರುವ ಅಭ್ಯರ್ಥಿಗಳಿಗೆ ಎಸ್ಸೆಮ್ಮೆಸ್ ಮೂಲಕ ಮುಂದಿನ ಮಾಹಿತಿ ನೀಡಲಾಗುತ್ತದೆ ಎಂದು ಪಾಸ್​ಪೋರ್ಟ್ ಇಲಾಖೆ ಹೇಳಿದೆ. ಟೆಕ್ನಿಕಲ್ ಮೈಂಟೆನೆನ್ಸ್ ​ನಿಂದಾಗಿ ಪಾಸ್​ ಪೋರ್ಟ್ ಸೇವಾ ಪೋರ್ಟಲ್ ಬಂದ್ ಆಗಿರುವ ಅವಧಿಯಲ್ಲಿ ನಾಗರಿಕರಿಗೆ ಹಾಗೂ ಎಲ್ಲಾ ಎಂಇಎ, ಆರ್​ಪಿಒ, ಬಿಒಐ, ಡಿಒಪಿ, ಪೊಲೀಸ್ ಪ್ರಾಧಿಕಾರಗಳಿಗೆ ಸಿಸ್ಟಂ ಲಭ್ಯ ಇರುವುದಿಲ್ಲ ಎಂದು ಇಲಾಖೆ ತಿಳಿಸಿದೆ.

Scroll to Top