(ನ್ಯೂಸ್ ಕಡಬ) newskadaba.com ಚಾಮರಾಜನಗರ, ಆ. 28. ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಮದ್ಯ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಅಬಕಾರಿ ಅಧಿಕಾರಿಗಳು ಪತ್ತೆ ಹಚ್ಚಿ, ವಶಕ್ಕೆ ತೆಗದುಕೊಂಡ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಬಂಧಿತನನ್ನು ಶಿವಸ್ವಾಮಿ ಎಂದು ಗುರುತಿಸಲಾಗಿದೆ. ಈತ ತನ್ನ ದ್ವಿಚಕ್ರ ವಾಹನದಲ್ಲಿ ಮದ್ಯವನ್ನು ಪ್ಲಾಸ್ಟಿಕ್ ಚೀಲದಲ್ಲಿ ಮರೆ ಮಾಚಿ ಸಾಗಾಣಿಕೆ ಮಾಡುತ್ತಿದ್ದಾಗ, ಗಸ್ತು ನಿರತರಾಗಿದ್ದ ಅಬಕಾರಿ ಸಿಬ್ಬಂದಿಗಳಿಗೆ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತ ಶಿವಸ್ವಾಮಿಯಿಂದ 2,918 ರೂ ಮೌಲ್ಯದ ಮದ್ಯ ಹಾಗೂ 70 ಸಾವಿರ ರೂ ಮೌಲ್ಯದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.