ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ‘ಕಿಮೋಥೆರಪಿ ಡೇ ಕೇರ್ ಸೆಂಟರ್‌’ ಪ್ರಾರಂಭ  ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ 

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 28. ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಡೇ ಕೇರ್ ಸೆಂಟರ್‌ ಗಳನ್ನು ಮುಂದಿನ ಒಂದು ತಿಂಗಳ ಒಳಗಾಗಿ ಪ್ರಾರಂಭಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಕೆ.ಸಿ ಜನರಲ್ ಆಸ್ಪತ್ರೆಯ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ನಿರ್ಮಾಣದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಕೆ.ಸಿ.ಜನರಲ್ ಆಸ್ಪತ್ರೆಯ ಆವರಣದಲ್ಲಿ ಸುಮಾರು 150 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೂಮಿ‌ಪೂಜೆ ನೆರವೇರಿಸಿದರು.‌ ಸಿಎಂ ಸಿದ್ದರಾಮಯ್ಯ ಅವರು ನಮ್ಮ ಮನವಿಗೆ ಸ್ಪಂದಿಸಿ, ಅತಿ ಕಡಿಮೆ ಅವಧಿಯಲ್ಲೇ ಅನುದಾನ ಮಂಜೂರು ಮಾಡಿಕೊಟ್ಟಿದ್ದಾರೆ. ಭೂಮಿ ಪೂಜೆ ಕೂಡಾ ನೆರವೇರಿಸಲಾಗಿದೆ. ಇದರ ಸಂಪೂರ್ಣ ಸದುಪಯೋಗ ನಮ್ಮ ಜನಸಾಮಾನ್ಯರಿಗೆ ದೊರೆಯಲಿದ್ದು, ಆರೋಗ್ಯ ವ್ಯವಸ್ಥೆಯ ಸಮಗ್ರ ಸುಧಾರಣೆಗೆ ಕ್ರಮವಹಿಸಲಾಗಿದೆ ಎಂದು ವರದಿ ತಿಳಿಸಿದೆ.

Also Read  ರೈಲಿನಡಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

 

 

error: Content is protected !!
Scroll to Top