(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 28. ಘಟಪ್ರಭಾ ನದಿ ನೀರಿನ ಪ್ರವಾಹದಿಂದಾಗಿ ಪ್ರತಿವರ್ಷ ಉಂಟಾಗುತ್ತಿರುವ ಹಾನಿಯ ಕುರಿತು ಸಂಬಂಧಪಟ್ಟ ಇಲಾಖೆಯ ಸಚಿವರೊಂದಿಗೆ ಸಭೆ ನಡೆಸಿ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಅವರು ತಮ್ಮನ್ನು ಭೇಟಿಯಾದ ಮುಧೋಳ ತಾಲೂಕಿನ ರೈತರ ನಿಯೋಗದೊಂದಿಗೆ ಚರ್ಚಿಸಿದ ಬಳಿಕ ನೀರಾವರಿ ಸಚಿವರು, ಕಂದಾಯ ಸಚಿವರು ಹಾಗೂ ಲೋಕೋಪಯೋಗಿ ಇಲಾಖೆ ಸಚಿವರೊಂದಿಗೆ ಆದಷ್ಟು ಬೇಗ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದಾಗಿ ತಿಳಿಸಿದರು. ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಘಟಪ್ರಭಾ ನದಿ ಪ್ರವಾಹದಿಂದಾಗಿ ಒಟ್ಟು 34639 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. 2019 ರಲ್ಲಿ 15088 ಹೆಕ್ಟೇರ್, 2021ರಲ್ಲಿ 7051 ಹೆಕ್ಟೇರ್ ಮತ್ತು 2024 ರಲ್ಲಿ 12500 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಉಂಟಾಗಿದೆ. ಇದಕ್ಕೆ ಸೂಕ್ತ ಬೆಳೆ ಪರಿಹಾರ ಹಾಗೂ ಶಾಶ್ವತ ಪರಿಹಾರ ಒದಗಿಸಬೇಕು ಎಂದು ರೈತರ ನಿಯೋಗ ಮನವಿ ಮಾಡಿತು.