ಐವನ್ ಡಿಸೋಜಾ ಮನೆಗೆ ಕಲ್ಲು ತೂರಾಟ ಪ್ರಕರಣ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 28. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರ ಮನೆಗೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ ಕುರಿತು ವರದಿಯಾಗಿದೆ.

Nk

ಬಂಧಿತರನ್ನು ಬಂಟ್ವಾಳ ತಾಲೂಕು ಬೋಳಂತೂರು ನಾರಾಯಣ ಕೋಡಿಯ ಭರತ್ ಯಾನೆ ಯಕ್ಷಿತ್ (24) ಮತ್ತು ಕೊಳ್ನಾಡು ಗ್ರಾಮದ ಪರ್ತಿಪ್ಪಾಡಿಯ ದಿನೇಶ್ ಕುಡ್ತಮುಗೇರು (20) ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್‌ ಅಗರ್ವಾಲ್‌ ಮಾಹಿತಿ ನೀಡಿದ್ದಾರೆ.

Scroll to Top