ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆ ಕಡಬ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

(ನ್ಯೂಸ್ ಕಡಬ) newskadaba.com ಕಡಬ, ಆ. 28. ಇಲ್ಲಿನ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟವು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಮತ್ತು ಸೈಂಟ್ ಜೋಕಿಮ್ಸ್ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆ ಕಡಬ ಇದರ ಜಂಟಿ ಸಹಯೋಗದಲ್ಲಿ ನಡೆಯಿತು.

Nk


ಕಡಬ ಭೂಮಿಕಾ ಕನ್ಸಲ್ಟೆನ್ಸಿ ಇದರ ಉದ್ಯಮಿಗಳಾದ ಶ್ರೀ ಸತೀಶ್ ನಾಯ್ಕ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ ಇಲಾಖೆಯ ಆಶಯದಂತೆ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ, ಸ್ಪರ್ಧಾ ಮನೋಭಾವದಿಂದ ಪಂದ್ಯಾಟದಲ್ಲಿ ಪಾಲ್ಗೊಳ್ಳುತ್ತಿರುವ ಸ್ಪರ್ಧಾಳುಗಳಿಗೆ ಅವರು ಶುಭ ಹಾರೈಸಿದರು. ಕಡಬ ತಾಲೂಕು ಪ್ರೌಢಶಾಲಾ ವಿಭಾಗದ ದೈಹಿಕ ಶಿಕ್ಷಣ ನೋಡಲ್ ಅಧಿಕಾರಿಗಳಾದ ಶ್ರೀ ಲೋಕೇಶ್ ಟಿ.ಎಸ್ ಅವರು ಪ್ರಾಸ್ತಾವಿಕ ಮಾತನಾಡಿ, ಪಂದ್ಯಾಟ ಆಯೋಜಕರಿಗೆ ಅಭಿನಂದಿಸಿ, ಸ್ಪರ್ಧಾಳುಗಳಿಗೆ ಶುಭ ಹಾರೈಸಿದರು.

Also Read  ಮದ್ಯ ಅಕ್ರಮ ದಾಸ್ತಾನು- ದಾಳಿ

ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ. ಪ್ರಕಾಶ್ ಪಾವ್ಲ್ ಡಿಸೋಜ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡು, ಪಂದ್ಯಾಟಕ್ಕೆ ಸಹಕರಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಕಡಬ ತಾಲೂಕು ಪ್ರಾಥಮಿಕ ಶಾಲಾ ವಿಭಾಗದ ದೈಹಿಕ ಶಿಕ್ಷಣ ನೋಡಲ್ ಅಧಿಕಾರಿಗಳಾದ ಶ್ರೀ ಚಂದ್ರಶೇಖರ್, ಕಡಬ ಕ್ಲಸ್ಟರ್ ಸಮೂಹ ಸಂಪನ್ಮೂಲ ಅಧಿಕಾರಿ ಶ್ರೀ ಗಣೇಶ್ ನಡುವಾಳ್, ಕಡಬ ಸೈಂಟ್ ಜೋಕಿಮ್ಸ್ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ಡೆನ್ನಿಸ್ ಫೆರ್ನಾಂಡಿಸ್, ಕಾರ್ಯದರ್ಶಿ ಶ್ರೀಮತಿ ಜೆಸಿಂತಾ ವೇಗಸ್, ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ಮುಖ್ಯಸ್ಥರುಗಳಾದ ವಂ. ಅಮಿತ್ ಪ್ರಕಾಶ್ ರೋಡ್ರಿಗಸ್, ಶ್ರೀ ಕಿರಣ್ ಕುಮಾರ್, ಶ್ರೀಮತಿ ದಕ್ಷಾ ಪ್ರಸಾದ್, ರಕ್ಷಕ -ಶಿಕ್ಷಕ ಸಮಿತಿಯ ಉಪಾಧ್ಯಕ್ಷರುಗಳಾದ ಶ್ರೀ ವಾಚಣ್ಣ ಕೆರೆಮೂಲೆ ಹಾಗೂ ಶ್ರೀ ಈಶ್ವರ ಉಪಸ್ಥಿತರಿದ್ದರು. ಸೈಂಟ್ ಜೋಕಿಮ್ಸ್ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶ್ರೀಲತಾ ಸ್ವಾಗತಿಸಿ, ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಹಿಲ್ಡಾ ರೋಡ್ರಿಗಸ್ ವಂದಿಸಿದರು. ಸೈಂಟ್ ಜೋಕಿಮ್ಸ್ ಪ್ರೌಢಶಾಲಾ ಶಿಕ್ಷಕಿ ಶ್ರೀಮತಿ ಪೂರ್ಣಿಮಾ ಪಿ ಕಾರ್ಯಕ್ರಮ ನಿರೂಪಿಸಿದರು.

error: Content is protected !!
Scroll to Top