ಢಾಕಾ ಸರೋವರದಲ್ಲಿ ಬಾಂಗ್ಲಾದೇಶ ಟಿವಿ ಪತ್ರಕರ್ತೆಯ ಮೃತದೇಹ ಪತ್ತೆ 

(ನ್ಯೂಸ್ ಕಡಬ) newskadaba.com ಢಾಕಾ, ಆ. 29. ಬಾಂಗ್ಲಾದೇಶ ಟಿವಿ ಪತ್ರಕರ್ತೆ ಸಾರಾ ರಹನುಮಾ ಅವರ ಮೃತದೇಹವು ಢಾಕಾದ ಹತಿರ್ ಜೀಲ್ ಸರೋವರದಲ್ಲಿ ಪತ್ತೆಯಾಗಿದೆ. ಸರೋವರದಲ್ಲಿ ಆಕೆಯ ಮೃತದೇಹ ತೇಲುತ್ತಿರುವುದು ಕಂಡುಬಂದಿದೆ. ಮೃತದೇಹವನ್ನು ಸರೋವರದಿಂದ ಹೊರತೆಗೆಯಲಾಗಿದೆ ಎಂದು ವರದಿ ತಿಳಿದುಬಂದಿದೆ.

ಇನ್ನು ಸಾವಿಗೂ ಮುನ್ನ ಸಾರಾ ನಿನ್ನೆ ರಾತ್ರಿ ಫೇಸ್ ಬುಕ್‌ ನಲ್ಲಿ ಸಂದೇಶವೊಂದನ್ನು ಪೋಸ್ಟ್ ಮಾಡಿದ್ದರು. ಜೊತೆಗೆ ಹಿಂದಿನ ಪೋಸ್ಟ್ ನಲ್ಲಿ ಅವರು, ಸಾವಿಗೆ ಸಮಾನವಾದ ಜೀವನವನ್ನು ಬದುಕುವುದಕ್ಕಿಂತ ಸಾಯುವುದು ಉತ್ತಮ ಎಂದು ಪೋಸ್ಟ್ ಮಾಡಿದ್ದರು. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನು ಆಕೆಯ ಪತಿ ಸೈಯದ್ ಶುವ್ರೋ ಪ್ರಕಾರ, ಅವಳು ಕೆಲಸಕ್ಕೆ ಹೋಗಿದ್ದಳು. ಆದರೆ ಮನೆಗೆ ಹಿಂದಿರುಗಲಿಲ್ಲ. ಬೆಳಗಿನ ಜಾವ 3 ಗಂಟೆಗೆ ಆಕೆ ಕೆರೆಗೆ ಹಾರಿದ್ದಾಳೆ ಎಂಬ ಮಾಹಿತಿ ಲಭಿಸಿದೆ ಎಂದು ಹೇಳಿದ್ದಾರೆ ಎನ್ನಲಾಗಿದೆ.

Also Read  ಸರ್ವೆ: ಯುವಕ ಮಂಡಲದಿಂದ ಯೋಗಾಸನ ಮಾಹಿತಿ

 

error: Content is protected !!
Scroll to Top