ಬಿಗಿ ಭದ್ರತೆಯಲ್ಲಿ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್..!

(ನ್ಯೂಸ್ ಕಡಬ) newskadaba.com ಬಳ್ಳಾರಿ, ಆ. 29. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ ಮತ್ತು ಸಂಗಡಿಗರ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯಾಗಿರುವ ಬೆನ್ನಲ್ಲೇ ಗುರುವಾರದಂದು ಬೆಳಗ್ಗೆ ದರ್ಶನ್‌ ನನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಕೇಂದ್ರ ಜೈಲಿಗೆ ಸ್ಥಳಾಂತರಿಸುತ್ತಿದ್ದಾರೆ.

Nk
ಪೊಲೀಸ್ ಬಿಗಿ ಬಂದೋಬಸ್ತ್ ಮೂಲಕ ಬಳ್ಳಾರಿ ಜೈಲಿಗೆ ಕರೆತರಲಾಗಿದ್ದು ನಟ ದರ್ಶನ್ ಬಳ್ಳಾರಿ ಜೈಲಿಗೆ ಕರೆ ತರುವ ಹಿನ್ನೆಲೆ ಡಿಸಿ ಪ್ರಶಾಂತ್ ಕುಮಾರ್ ಮಿಶ್ರ ಮತ್ತು ಡಾ. ಶೋಭಾರಾಣಿ ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ. ನಟ ದರ್ಶನ್ ಜೈಲಿಗೆ ಬಂದಾಗ ಅವರ ಅರೋಗ್ಯ ತಪಾಸಣೆ ನಡೆಸಿ ಬಳಿಕ ಹೈ ಸೆಕ್ಯೂರಿಟಿ ಸೆಲ್ ನಲ್ಲಿ ದರ್ಶನ್ ಬಂಧಿಸಿಡಲು ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಜೈಲಿನ ಸುತ್ತ ಅಭಿಮಾನಿಗಳು ಸೇರುವ ಹಿನ್ನೆಲೆಯಲ್ಲಿ ಜೈಲಿನ ಹೊರಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Scroll to Top