(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ದ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2024-25ನೇ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (SSP) ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ಕೋರ್ಸು ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು. ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳನ್ನು ಪಡೆದಿರಬೇಕು ಹಾಗೂ ಕುಟುಂಬದ ವಾರ್ಷಿಕ ಆದಾಯ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ರೂ. 2 ಲಕ್ಷ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿಗಳಿಗೆ ರೂ. 2.50 ಲಕ್ಷ ಒಳಗಿರಬೇಕು. ಅರ್ಜಿಯನ್ನು SSP ಪೋರ್ಟಲ್ https://ssp.postmatric.karnataka.gov.in ಮೂಲಕ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್ ಸೈಟ್ ವಿಳಾಸ https://dom.karnataka.gov.in ಅಥವಾ SSP ಪೋರ್ಟಲ್ https://ssp.postmatric.karnataka.gov.in ಸಹಾಯವಾಣಿ ಸಂಖ್ಯೆ 8277799990 ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.