ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ಧೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಶಿಶು ಅಭಿವೃದ್ದಿ ಯೋಜನೆ ಬೆಳ್ತಂಗಡಿ, ಬಂಟ್ವಾಳ, ಮಂಗಳೂರು ಗ್ರಾಮಾಂತರ, ಮಂಗಳೂರು ನಗರ, ಪುತ್ತೂರು, ಸುಳ್ಯ ಹಾಗೂ ವಿಟ್ಲ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 73 ಅಂಗನವಾಡಿ ಕಾರ್ಯಕರ್ತೆ ಹಾಗೂ 261 ಅಂಗನವಾಡಿ ಸಹಾಯಕಿಯರ ಗೌರವ ಸೇವೆಗಳ ಹುದ್ದೆಗೆ ಆನ್‍ ಲೈನ್ ನಲ್ಲಿ ಆಸಕ್ತ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಇಲಾಖೆಯ ವೆಬ್‍ ಸೈಟ್ ವಿಳಾಸ https:karnemakaone.kar.nic.in/abcd/ ನಲ್ಲಿ ಅರ್ಜಿ ಸಲ್ಲಿಸಬೇಕು.
Nk


ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 26 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಶಿಶು ಅಬಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಬೆಳ್ತಂಗಡಿ: 08256-295134, ಬಂಟ್ವಾಳ: 7760729919, ಮಂಗಳೂರು(ಗ್ರಾ): 9620636888, ಮಂಗಳೂರು(ನ): 0824 – 2432809 / 2959809, ಪುತ್ತೂರು: 08251-298788, ಸುಳ್ಯ: 08257-230239, ವಿಟ್ಲ: 08255-238080 ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಗ್ಯಾಸ್ ಸೋರಿಕೆ ಯಿಂದ ಅಗ್ನಿ ಅವಘಡ ➤ತಪ್ಪಿದ ಭಾರಿ ಅನಾಹುತ

 

error: Content is protected !!
Scroll to Top