ನೌಕಾನೆಲೆಗೆ ಸಂಬಂಧಿಸಿದ ಮಾಹಿತಿಗಳನ್ನು ಶತ್ರು ದೇಶಗಳಿಗೆ ರವಾನೆ ಮೂವರನ್ನು ವಶಕ್ಕೆ ಪಡೆದ ರಾಷ್ಟ್ರೀಯ ತನಿಖಾ ತಂಡ

(ನ್ಯೂಸ್ ಕಡಬ) newskadaba.com ಕಾರವಾರ, ಆ. 29.  ಐಎನ್‌ಎಸ್ ಕದಂಬ ನೌಕಾನೆಲೆಗೆ ಸಂಬಂಧಿಸಿದ ಚಿತ್ರಗಳು ಮತ್ತು ಮಾಹಿತಿಗಳನ್ನು ಶತ್ರು ದೇಶಗಳಿಗೆ ರವಾನಿಸಿದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ತಂಡ ಮೂವರನ್ನು ಕಸ್ಟಡಿಗೆ ತೆಗೆದುಕೊಂಡಿದೆ ಎನ್ನಲಾಗಿದೆ.

ನೌಕಾನೆಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಆರೋಪಿಗಳನ್ನು ಉಪ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಮೂವರು ಇನ್ಸ್‌ಪೆಕ್ಟರ್‌ಗಳು ಸೇರಿದಂತೆ ಎನ್‌ಐಎ ಅಧಿಕಾರಿಗಳ ತಂಡವು ತಮ್ಮ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದೆ. ಆರೋಪಿಗಳನ್ನು ಕಾರವಾರ ತಾಲೂಕಿನ ತೋಡೂರು ಗ್ರಾಮದ ಸುನೀಲ್ ನಾಯ್ಕ್, ಮುದ್ಗಾ ಗ್ರಾಮದ ವೇತನ್ ರಂಡೇಲ್ ಮತ್ತು ಹಳವಳ್ಳಿ ಗ್ರಾಮದ ಅಕ್ಷಯ್ ರವಿ ನಾಯ್ಕ್ ಎಂದು ಗುರುತಿಸಲಾಗಿದೆ.

Also Read  ಪುನೀತ್ ರಾಜ್‌ಕುಮಾರ್ ಜನ್ಮದಿನದಂದು ವಿಶ್ವಸಂಸ್ಥೆಯಲ್ಲಿ 'ಕಾಂತಾರ' ಪ್ರದರ್ಶನ

 

 

error: Content is protected !!
Scroll to Top