ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಅಶ್ಲೀಲ ವರ್ತನೆ- ಯುವಕ ಅರೆಸ್ಟ್ – News Kadaba

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಅಶ್ಲೀಲ ವರ್ತನೆ- ಯುವಕ ಅರೆಸ್ಟ್

crime, arrest, suspected

(ನ್ಯೂಸ್ ಕಡಬ) newskadaba.com ಉಡುಪಿ, ಆ. 29. ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಅಶ್ಲಿಲವಾಗಿ ವರ್ತಿಸಿದ್ದ ಯುವಕನೋರ್ವನನ್ನು ಮಣಿಪಾಲ ಪೊಲೀಸರು ಬಂಧಿಸಿರುವ ಘಟನೆ ಭಟ್ಕಳದಲ್ಲಿ ನಡೆದಿದೆ.

Nk
ಬಂಧಿತನನ್ನು ಭಟ್ಕಳ ಮೂಲದ ಶುರೈಮ್ (22) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಕೆಲಸಕ್ಕಿದ್ದ ಉಡುಪಿ ಮೂಲದ ಯುವತಿಯೋರ್ವಳು ಬೆಂಗಳೂರಿನಿಂದ ಉಡುಪಿಗೆ 2 ದಿನಗಳ ಹಿಂದೆ ಪ್ರಯಾಣ ಬೆಳೆಸಿದ್ದಳು. ರೈಲು ಮುಲ್ಕಿ ಸಮೀಪಿಸುತ್ತಿದ್ದ ವೇಳೆ ಅದೇ ರೈಲಿನಲ್ಲಿದ್ದ ಶುರೈಮ್ ಎಂಬಾತ ಆಕೆಯ ಜತೆಗೆ ಅಸಭ್ಯವಾಗಿ ವರ್ತಿಸಿರುವುದಾಗಿ ಆರೋಪಿಸಲಾಗಿದೆ. ಈ ಬಗ್ಗೆ ಯುವತಿ ಆಕ್ಷೇಪ ವ್ಯಕ್ತಪಡಿಸಿದ್ದು, ಆತ ಅಲ್ಲಿಯೇ ಕ್ಷಮೆಯಾಚಿಸಿದ್ದ ಎನ್ನಲಾಗಿದೆ. ಯುವತಿ ಈ ಬಗ್ಗೆ ರೈಲ್ವೇ ಆಪ್‌ ನಲ್ಲಿ ದೂರು ದಾಖಲಿಸಿದ್ದು, ಉಡುಪಿಗೆ ಬಂದಿಳಿದ ಬಳಿಕ ರೈಲ್ವೇ ಪೊಲೀಸರ ಗಮನಕ್ಕೂ ತಂದಿದ್ದರು. ಅಲ್ಲದೇ ಮಣಿಪಾಲ ಠಾಣಾ ಪೊಲೀಸರಿಗೂ ಘಟನೆಯ ಸಂಬಂಧಿಸಿ ಮಾಹಿತಿಯನ್ನು ನೀಡಲಾಗಿತ್ತು. ಅಲ್ಲದೇ ಯುವತಿಯು ಆರೋಪಿಯ ಫೋಟೊ ಕೂಡಾ ತನ್ನ ಮೊಬೈಲ್‌ನಲ್ಲಿ ಕ್ಲಿಕ್ಕಿಸಿಕೊಂಡಿದ್ದಳು. ಘಟನೆಗೆ ಸಂಬಂಧಿಸಿ ಕಾರ್ಯಪ್ರವೃತ್ತರಾದ ಪೊಲೀಸರು ಎಲ್ಲಾ ಮಾಹಿತಿಯನ್ನು ಕ್ರೋಢೀಕರಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದುಬಂದಿದೆ.

Scroll to Top