(ನ್ಯೂಸ್ ಕಡಬ) newskadaba.com ಕೊಚ್ಚಿ, ಆ. 29. ಮಲಯಾಳಂ ಚಿತ್ರರಂಗದಲ್ಲಿ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ಕುರಿತಂತೆ ಹೇಮಾ ಕಮಿಟಿ ವರದಿ ಬಳಿಕ ಇದೀಗ ಮಲೆಯಾಳಂ ಸಿನಿಮಾ ರಂಗದಲ್ಲಿ ಅಲ್ಲೋಲ ಕಲ್ಲೋಲ ಎದ್ದಿದೆ. ಇದೀಗ ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಕೇರಳದ ಆಡಳಿತಾರೂಡ ಸಿಪಿಐ(ಎಂ) ಶಾಸಕ, ಮಲಯಾಳಂ ಚಿತ್ರರಂಗದ ಖ್ಯಾತ ನಟ ಮುಕೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಟಿಯೊಬ್ಬರು ಮುಕೇಶ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಆರೋಪಿಸಿದ ಹಿನ್ನೆಲೆ ತನಿಖೆ ಆರಂಭಿಸಿದ ಪೊಲೀಸರು ಕೊಚ್ಚಿ ನಗರದ ಮಾರಾಡು ಪೊಲೀಸ್ ಠಾಣೆಯಲ್ಲಿ ನಟನ ವಿರುದ್ಧ ಐಪಿಸಿ 376 (ಅತ್ಯಾಚಾರ) ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.