ನಿದ್ರೆಯಲ್ಲಿದ್ದ ಪತ್ನಿಯ ಕತ್ತು ಕೊಯ್ದು ಹತ್ಯೆ..! ಆರೋಪಿ ಅರೆಸ್ಟ್..!                     

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29.  ಮೂರು ವರ್ಷಗಳ ಹಿಂದೆಯಷ್ಟೇ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಪತಿಯೊಬ್ಬ ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ನಗರದ ಕೆಂಗೇರಿ ಉಪನಗರದಲ್ಲಿ ನಡೆದಿದೆ.

ನವ್ಯಾ (25) ಹತ್ಯೆಯಾದ ದುರ್ದೈವಿ. ಆರೋಪಿಯನ್ನು ಆಕೆಯ ಪತಿ ಕಿರಣ್ ಎಂದು ಗುರುತಿಸಲಾಗಿದೆ. ಕ್ಯಾಬ್‌ ಚಾಲಕನಾಗಿದ್ದ ಕಿರಣ್‌, ಎಸ್‌ಎಂವಿ ಲೇಔಟ್‌ನ ಒಂದನೇ ಬ್ಲಾಕ್‌ನಲ್ಲಿ ನೆಲೆಸಿದ್ದರು. ಇತ್ತೀಚೆಗೆ ದಂಪತಿ ಮಧ್ಯೆ ಕೌಟುಂಬಿಕ ಕಾರಣಕ್ಕೆ ಮನಸ್ತಾಪ ಉಂಟಾಗಿತ್ತು. ಕಿರಣ್‌ ಅತಿಯಾಗಿ ಮದ್ಯ ಸೇವಿಸುತ್ತಿದ್ದರು. ದಂಪತಿ ಮಧ್ಯೆ ನಿತ್ಯ ಗಲಾಟೆಯಾಗುತ್ತಿತ್ತು ಎನ್ನಲಾಗಿದೆ. ರಾತ್ರಿ ಗಾಢನಿದ್ರೆಗೆ ಹೋಗಿದ್ದ ನವ್ಯಶ್ರೀ ಗೆಳತಿಗೆ ಬೆಳಗ್ಗೆ ಎಚ್ಚರವಾಗಿದೆ. ಬೆಳಗ್ಗೆ 6 ಗಂಟೆ ವೇಳೆಗೆ ಬಟ್ಟೆ ಒದ್ದೆಯಾಗಿರುವ ಅನುಭವ ಆಗಿದೆ. ಎಚ್ಚರವಾಗಿ ನೋಡಿದಾಗ ರಕ್ತದ ಮಡುವಿನಲ್ಲಿ ನವ್ಯಶ್ರೀ ಬಿದ್ದಿರುವುದು ಕಂಡು ಬಂದಿದೆ. ಈ ಸಂಬಂಧ ನವ್ಯಶ್ರೀ ಗೆಳತಿ ದೂರು ನೀಡಿದ್ದು, ಕೆಂಗೇರಿ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ. ಇದೀಗ ಆರೋಪಿ ಕಿರಣ್ ಅನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿ ಪ್ರಕಟಣೆ ತಿಳಿಸಿದೆ.

Also Read  ಕಾರ್ಗಿಲ್ ವಿಜಯ ದಿನ ಲಡಾಕ್ ನ ದ್ರಾಸ್ ನಲ್ಲಿ ಯೋಧರ ಸ್ಮಾರಕಕ್ಕೆ ಪ್ರಧಾನಿ ಮೋದಿ ನಮನ

 

error: Content is protected !!
Scroll to Top