ಅಗತ್ಯ ಬಿದ್ದರೆ ಪೊಲೀಸರ ಮನೆ ಮುಂದೆಯೂ ಪ್ರತಿಭಟನೆ ನಡೆಸುತ್ತೇವೆ – ಶಾಸಕ ಭರತ್ ಶೆಟ್ಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 29. ರಾಜ್ಯಪಾಲರಿಗೆ ಬೆದರಿಕೆ ಹಾಕಿದ ಐವನ್ ಡಿಸೋಜಾ ಮೇಲೆ ಪ್ರಕರಣ ದಾಖಲಿಸಲು ಪೊಲೀಸರು ಹಿಂದೆ ಮುಂದೆ ನೋಡುತ್ತಿದ್ದು, ಅಗತ್ಯ ಬಂದರೆ ಪೊಲೀಸರ ಮನೆ ಮುಂದೆಯೂ ಪ್ರತಿಭಟನೆ ನಡೆಸಲಾಗುವುದು ಎಂದು ಶಾಸಕ ಭರತ್ ಶೆಟ್ಟಿ ಎಚ್ಚರಿಸಿದ್ದಾರೆ.

Nk

ಮುಡಾ ಹಗರಣದ ಹಿನ್ನೆಲೆ ಸಿಎಂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಮತ್ತು ಎಂಎಲ್.ಸಿ ಐವನ್ ಡಿಸೋಜಾ ಮೇಲೆ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿ ಪುತ್ತೂರಿನಲ್ಲಿ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದೆ. ಈ ವೇಳೆ ಮಾತನಾಡಿದ ಶಾಸಕ ಭರತ್ ಶೆಟ್ಟಿ, ಬಿಜೆಪಿ ಶಾಸಕರು ಹಾಗೂ ಕಾರ್ಯಕರ್ತರ ಮೇಲೆ ಪೋಲೀಸರು ಪ್ರಕರಣ ದಾಖಲಿಸುತ್ತಾರೆ. ಆದರೆ ರಾಜ್ಯಪಾಲರಿಗೆ ಬೆದರಿಕೆ ಹಾಕಿದ ಐವನ್ ಡಿಸೋಜಾ ಮೇಲೆ ಪ್ರಕರಣ ದಾಖಲಿಸಲು ಮೀನಮೇಷ ಎಣಿಸುತ್ತಿದ್ದಾರೆ. ಐವನ್ ಮೇಲೆ ಯಾವ ಸೆಕ್ಷನ್ ಹಾಕಬೇಕು ಅನ್ನೋದನ್ನು ಮಂಗಳೂರು ಕಮಿಷನರ್ ಗೆ ಕಳುಹಿಸಲಾಗಿದೆ. ಆದರೂ ಪೋಲೀಸರು ಪ್ರಕರಣ ದಾಖಲಿಸುತ್ತಿಲ್ಲ. ಬಿಜೆಪಿಗೆ ಉಗ್ರ ಹೋರಾಟ ನಡೆಸಿ ಗೊತ್ತಿದೆ. ಇದು ಒಂದು ಟ್ರೈಲರ್ ಮಾತ್ರ, ಅಗತ್ಯ ಬಿದ್ದರೆ ಪೋಲೀಸ್ ಅಧಿಕಾರಿಗಳ ಮನೆ ಮುಂದೆಯೂ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

Also Read  ಕಡಬ: ನಿಗೂಢವಾಗಿ ಕಾಣೆಯಾಗಿದ್ದ ಯುವಕ ಪತ್ತೆ

error: Content is protected !!
Scroll to Top