ರೇಣುಕಾಸ್ವಾಮಿ ಕೊಲೆ ಪ್ರಕರಣ- ಮತ್ತೆ ವಿಚಾರಣೆಗೆ ಹಾಜರಾದ ನಟ ಚಿಕ್ಕಣ್ಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಚಿಕ್ಕಣ್ಣ ಇಂದು ಬಸವೇಶ್ವರನಗರದಲ್ಲಿರುವ ಎಸಿಪಿ ಕಚೇರಿಗೆ ಎರಡನೇ ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ. ಆರೋಪಿ ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದಕ್ಕೆ ಮತ್ತೆ ವಿಚಾರಣೆಗೆ ಕರೆಯಲಾಗಿದೆ ಎಂದು ವರದಿ ತಿಳಿಸಿದೆ.

ಈ ಕುರಿತು ವಿಚಾರಣೆಯ ಬಳಿಕ ಚಿಕ್ಕಣ್ಣ ಮಾತನಾಡಿ, ನಾನು ಒಬ್ಬ ಸಾಕ್ಷಿದಾರನಾಗಿದ್ದುಕೊಂಡು ಹೋಗಿ ದರ್ಶನ್‌ ರನ್ನು ಮಾತನಾಡಿಸಬಾರದು ಅನ್ನೋದು ನನಗೆ ಗೊತ್ತಿರಲಿಲ್ಲ. ಹಾಗಾಗಿ ನಾನು ಪರಪ್ಪನ ಅಗ್ರಹಾರಕ್ಕೆ ಹೋಗಿ ದರ್ಶನ್ ಭೇಟಿ ಮಾಡಿ ಬಂದಿದ್ದೆ. ಹಾಗಾಗಿ ವಿಚಾರಣೆಗೆ ಬರುವಂತೆ ನಿನ್ನೆ ನೋಟಿಸ್ ಕೊಟ್ಟಿದ್ದರು. 9 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ಕೊಡಲಾಗಿತ್ತು. ಹಾಗಾಗಿ ಇಂದು ವಿಚಾರಣೆಗೆ ಹಾಜರಾಗಿದ್ದೇನೆ ಎಂದರು. ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಕೇಸ್‌ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್‌ ಗೆ ಸೆಪ್ಟೆಂಬರ್ 9ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶ ಪ್ರಕಟಿಸಿತ್ತು.

Also Read  ಮಲ್ಪೆ ಬಂದರಿನಲ್ಲಿ 17 ಮಕ್ಕಳ ರಕ್ಷಣೆ.!

 

 

error: Content is protected !!
Scroll to Top