ಎಕ್ಸ್ ಪ್ರೆಸ್‌ ವೇನಲ್ಲಿ ಹುಚ್ಚಾಟ- ಚಾಲಕರು ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಡ್ಯ, ಆ. 29. ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್‌ ವೇನಲ್ಲಿ ಹುಚ್ಚಾಟ ನಡೆಸಿ ಖಾಸಗಿ ಬಸ್ ಚಾಲಕ ಮತ್ತು ಸಹ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಚಾಲಕ ವಿರುದ್ಧ ದಿಕ್ಕಿನಲ್ಲಿ ಬಸ್ ಓಡಿಸುತ್ತಿರುವ ವೀಡಿಯೋವನ್ನು ಪ್ರಯಾಣಿಕರೊಬ್ಬರು ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪರಿಣಾಮ, ವಿಡಿಯೋ ನೋಡಿದ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಡಿಜಿಪಿ ಅಲೋಕ್ ಕುಮಾರ್ ರನ್ನು ಟ್ಯಾಗ್ ಮಾಡಿ ತನ್ನ ಎಕ್ಸ್ ಖಾತೆ ಮೂಲಕ ಈ ವೀಡಿಯೋ ಪೋಸ್ಟ್ ಮಾಡಲಾಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆ ಶ್ರೀರಂಗಪಟ್ಟಣ ಗ್ರಾಮಾಂತರ ಪೋಲೀಸರು ಕಾರ್ಯಾಚರಣೆ ನಡೆಸಿ ಚಾಲಕ ಪ್ರಶಾಂತ್ ಹಾಗೂ ಸಹ ಚಾಲಕ ನೀಲಪ್ಪನನ್ನು ಬಂಧಿಸಿದ್ದಾರೆ. ಸಂಚಾರ ನಿಯಮ ಉಲ್ಲಂಘನೆ ಆರೋಪ ದಡಿ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.

Also Read  ಕರ್ನಾಟಕದಲ್ಲಿ ಗುರುವಾರ ಮಾಸ್ಕ್ ಡೇ ಆಚರಣೆಗೆ ಸಿದ್ಧತೆ

 

 

error: Content is protected !!
Scroll to Top