16 ನೇ ಹಣಕಾಸು ಆಯೋಗಕ್ಕೆ ಸಿಎಂ ಸಿದ್ದರಾಮಯ್ಯ ಮನವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. 16ನೇ ಹಣಕಾಸು ಆಯೋಗ ಅನುದಾನ ಹಂಚಿಕೆ ಸಮತೋಲಿತ ಹಾಗೂ ಪಾರದರ್ಶಕತೆಯಿಂದ ಕೂಡಿರಲಿ ಎಂಬುದು ರಾಜ್ಯದ ನಿರೀಕ್ಷೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 16ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ. ಅರವಿಂದ ಪನಗಾರಿಯ ಹಾಗೂ ಸದಸ್ಯರೊಂದಿಗೆ ಸಭೆಯಲ್ಲಿ ಮಾತನಾಡಿದ ಅವರು ಉತ್ತಮವಾಗಿ ಅಭಿವೃದ್ಧಿ ಕಾಣುತ್ತಿರುವ ರಾಜ್ಯಗಳತ್ತ ಹಣಕಾಸು ಆಯೋಗ ಸಮಾನ ಆದ್ಯತೆ ನೀಡುವ ಅಗತ್ಯ ಇದೆ. ಪ್ರಗತಿಶೀಲ ರಾಜ್ಯಗಳ ಜನತೆ ತಮ್ಮ ತೆರಿಗೆ ಹಣದಿಂದ ರಾಜ್ಯಕ್ಕೆ ಅನುಕೂಲಕರವಾಗಿರಬೇಕು ಎಂಬ ನಿರೀಕ್ಷೆ ಹೊಂದಿದ್ದಾರೆ ಎಂದು ತಿಳಿಸಿದರು.

ಕರ್ನಾಟಕವು ದೇಶದ ಪ್ರಗತಿಯಲ್ಲಿ ಕೇಂದ್ರ ಬಿಂದುವಾಗಿದೆ. ರಾಷ್ಟ್ರೀಯ ಜಿಡಿಪಿಗೆ ಕರ್ನಾಟಕ ಸುಮಾರು ಶೇ8.4ರಷ್ಟು ಕೊಡುಗೆ ನೀಡುತ್ತಿದೆ. ಜಿಎಸ್ ​ಟಿ ಸಂಗ್ರಹದಲ್ಲಿ ಕರ್ನಾಟಕ ದೇಶಕ್ಕೆ ಎರಡನೇ ಅತಿ ದೊಡ್ಡ ರಾಜ್ಯವಾಗಿದೆ. ರಾಜ್ಯದಿಂದ ವಾರ್ಷಿಕ ಸುಮಾರು 4 ಲಕ್ಷ ಕೋಟಿ ತೆರಿಗೆ ರೂಪದಲ್ಲಿ ತೆರಿಗೆ ಹಣ ಕೇಂದ್ರಕ್ಕೆ ಹೋಗುತ್ತಿದೆ. ರಾಜ್ಯಕ್ಕೆ ತೆರಿಗೆ ಪಾಲಿನಲ್ಲಿ ವಾರ್ಷಿಕ ಸುಮಾರು 45 ಸಾವಿರ ಕೋಟಿ ರೂ., ಇದೆ ಆದರೆ 15,000 ಕೋಟಿ ರೂ. ಮಾತ್ರ ಕೇಂದ್ರದಿಂದ ಅನುದಾನ ಬರುತ್ತಿದೆ. ಆ ಮೂಲಕ ರಾಜ್ಯ ಕೇಂದ್ರಕ್ಕೆ ನೀಡುವ ಒಂದು ರೂಪಾಯಿಗೆ ವಾಪಸು ಕೇವಲ 15 ಪೈಸೆ ಮಾತ್ರ ಪಡೆಯುತ್ತಿದೆ ಎಂದು ವಿವರಿಸಿದರು ಎನ್ನಲಾಗಿದೆ.

Also Read  "ಆಯುಷ್ ಪೌಷ್ಟಿಕ ಆಹಾರ ಸಪ್ತಾಹ" ಕಾರ್ಯಕ್ರಮ

 

 

error: Content is protected !!
Scroll to Top