’ರಾಹುಲ್ ನಮ್ಮ ತಂಡದ ಅವಿಭಾಜ್ಯ ಅಂಗ’  ಫ್ರಾಂಚೈಸಿ ಮಾಲೀಕ ಸಂಜೀವ್ ಗೋಯೆಂಕಾ

(ನ್ಯೂಸ್ ಕಡಬ) newskadaba.com ಕೋಲ್ಕತ್ತ, ಆ. 29. ಕನ್ನಡಿಗ ಕೆ.ಎಲ್. ರಾಹುಲ್ ಮುಂದಿನ ಐಪಿಎಲ್ ಆವೃತ್ತಿಯಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡವನ್ನು ತೊರೆಯಲಿದ್ದಾರೆ ಎಂಬ ವದಂತಿಗಳ ನಡುವೆ ರಾಹುಲ್ ತಮ್ಮ ತಂಡದ ಅವಿಭಾಜ್ಯ ಅಂಗ ಎಂದು ಫ್ರಾಂಚೈಸಿ ಮಾಲೀಕ ಸಂಜೀವ್ ಗೋಯೆಂಕಾ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ ತಂಡದ ಮಾಜಿ ವೇಗದ ಬೌಲರ್ ಜಹೀರ್ ಖಾನ್ ಅವರು ಲಖನೌ ತಂಡದ ಮೆಂಟರ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಘೋಷಿಸಿದ್ದಾರೆ. ಅಂದು ಪಂದ್ಯ ಮುಗಿಯುತ್ತಿದ್ದಂತೆಯೇ ಮೈದಾನದಲ್ಲಿಯೇ ಗೋಯೆಂಕಾ ಅವರು ರಾಹುಲ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದು ಕ್ರಿಕೆಟ್ ವಲಯದಲ್ಲಿ ಭಾರೀ ಸಂಚಲನ ಉಂಟು ಮಾಡಿತ್ತು. ಹೀಗಾಗಿ ಮುಂದಿನ ಆವೃತ್ತಿಯಲ್ಲಿ ರಾಹುಲ್ ಲಖನೌ ತಂಡವನ್ನು ತೊರೆಯಲಿದ್ದಾರೆ ಎಂಬ ವದಂತಿ ಹಬ್ಬಿತ್ತು. ರಾಹುಲ್ ನಮ್ಮ ತಂಡದ ಅವಿಭಾಜ್ಯ ಅಂಗವಾಗಿದ್ದು, ಅವರು ನಮ್ಮ ಕುಟುಂಬದ ಸದಸ್ಯನಿದ್ದಂತೆ ಎಂದು ಗೋಯೆಕ್‌ ಹೇಳಿದ್ದಾರೆ

Also Read  ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ➤ ನಾಟಕ ನಿರ್ದೇಶಕ ಮತ್ತು ಬರಹಗಾರ ವಸಂತ ವಿ ಅಮೀನ್ ಅವರನ್ನು ಸನ್ಮಾನ ಕಾರ್ಯಕ್ರಮ

 

 

error: Content is protected !!
Scroll to Top