ಮುಡಾ ಕೇಸ್ ಪ್ರಕರಣ- ಆಗಸ್ಟ್ 31ಕ್ಕೆ ವಿಚಾರಣೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ಇಂದು ವಿಚಾರಣೆ ನಡೆಸಿದ್ದು, ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿಯವರ ವಾದ ಆಲಿಸಿದಂತ ನ್ಯಾಯಪೀಠವು ಆಗಸ್ಟ್. 31ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠ ನಡೆಸಿತು. ಈ ವಾದವನ್ನು ಆಲಿಸಿದ ನಂತರ ಹೈಕೋರ್ಟ್, ಪ್ರತಿವಾದಿಗಳ ವಾದವನ್ನು ಆಲಿಸುವುದಕ್ಕೆ ಸಮಯಾವಕಾಶ ಕೋರಿದ ಕಾರಣ ಆಗಸ್ಟ್. 31ರ ಶನಿವಾರ ಬೆಳಿಗ್ಗೆ 10.30ಕ್ಕೆ ವಿಚಾರಣೆಯನ್ನು ಮುಂದೂಡಿದೆ.

Scroll to Top