ದ.ಕ. ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ತೀವ್ರಗೊಳ್ಳುವ ಸಾಧ್ಯತೆ ಐಎಂಡಿ ರೆಡ್ ಅಲರ್ಟ್ ಘೋಷಣೆ      

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ತೀವ್ರಗೊಳ್ಳುವ ಸಾಧ್ಯತೆ ಇದೆ. ಆಗಸ್ಟ್ 30ಕ್ಕೆ ರೆಡ್ ಅಲರ್ಟ್ ಘೋಷಿಸಿದ್ದು, ಆಗಸ್ಟ್ 31ರಂದು ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ರೆಡ್ ಅಲರ್ಟ್‌ನ್ನು ಐಎಂಡಿ ಘೋಷಿಸಿದೆ ಎನ್ನಲಾಗಿದೆ.

ಆಗಸ್ಟ್ 31, ಸೆಪ್ಟೆಂಬರ್ 1, ಮತ್ತು 2 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಗಾಳಿಯ ವೇಗ ಗಂಟೆಗೆ 35 ರಿಂದ 45 ಕಿಮೀ ತಲುಪುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಎಚ್ಚರಿಕೆ ವಹಿಸುವಂತೆ ಐಎಂಡಿ ಎಚ್ಚರಿಕೆ ನೀಡಿದೆ. ಉಡುಪಿ ಜಿಲ್ಲೆಯಲ್ಲಿ ಗುರುವಾರ ಉತ್ತಮ ಮಳೆಯಾಗಿದ್ದು, ದಿನವಿಡೀ ಬಿರುಗಾಳಿ ಸಹಿತ ಮಳೆಯಾಗಿದೆ. ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 28.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

Also Read  ವಿಪರೀತ ಗಾಳಿ - ಮಳೆಯ ಹಿನ್ನೆಲೆ ➤ ಬೆಳ್ತಂಗಡಿ ತಾಲೂಕಿನಲ್ಲಿ ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ

 

 

error: Content is protected !!
Scroll to Top