ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಜಿ.ಟಿ.ಟಿ.ಸಿ. ಡಿಪ್ಲೋಮಾ ಕೋರ್ಸ್ ಗಳ ಪ್ರವೇಶ – ಅರ್ಜಿ ಆಹ್ವಾನ – News Kadaba

ಜಿ.ಟಿ.ಟಿ.ಸಿ. ಡಿಪ್ಲೋಮಾ ಕೋರ್ಸ್ ಗಳ ಪ್ರವೇಶ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಜಿ.ಟಿ.ಟಿ.ಸಿ. ಸರ್ಕಾರಿ ಡಿಪ್ಲೋಮಾ ಕಾಲೇಜಿನಲ್ಲಿ ಆರ್ಟಿಫಿಶಿಯಲ್ ಇಂಟಲಿಜನ್ಸ್ ಆಂಡ್ ಮೆಷಿನ್ ಲರ್ನಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್ ಸಂಬಂಧಿಸಿದ ಡಿಪ್ಲೋಮಾ ಕೋರ್ಸ್‍ ಗಳಾದ ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನುಫಾಕ್ಚರಿಂಗ್ ಕೋರ್ಸ್ ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಎಲ್ಲಾ ಕೋರ್ಸ್‍ಗಳಿಗೆ SSLC ಪಾಸ್ ಅಥವಾ PUC ಪಾಸ್/ಫೇಲ್ ಆದ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. PUC(Science) ಹಾಗೂ ITI (Mechanical) ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ನೇರವಾಗಿ ದ್ವಿತೀಯ ವರ್ಷದ ಡಿಪ್ಲೋಮಾ ಕೋರ್ಸ್‍ ಗಳ ಪ್ರವೇಶಾತಿಗೆ ಅರ್ಹರಾಗಿರುತ್ತಾರೆ. ಈ ಸಂಸ್ಥೆಯು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿದ್ದು, 30% ಥಿಯರಿ ಮತ್ತು 70% ಪ್ರಾಕ್ಟಿಕಲ್ ತರಬೇತಿ ನೀಡುವ 100% ಉದ್ಯೋಗಾಧಾರಿತ ಕೋರ್ಸ್‍ ಗಳಾಗಿರುತ್ತವೆ. ಈ ಮೇಲಿನ ಕೋರ್ಸ್‍ಗಳನ್ನು ಅಧ್ಯಯನ ಮಾಡುವಾಗ 3 ವರ್ಷದ ಡಿಪ್ಲೋಮಾ ತರಬೇತಿ ನಂತರ ಕಡ್ಡಾಯ ಒಂದು ವರ್ಷದ ಇಂಟರ್ನ್‍ ಶಿಪ್ ತರಬೇತಿ ನೀಡಲಾಗುತ್ತದೆ. ಈ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಪ್ರತೀ ತಿಂಗಳು ರೂ. 15,000 ರಿಂದ ರೂ. 20,000 ಶಿಷ್ಯವೇತನ ಸಹ ನೀಡಲಾಗುತ್ತದೆ. SSLC ಪಾಸ್/ಫೇಲ್ ಆದ ವಿದ್ಯಾರ್ಥಿಗಳಿಗೂ 1 ವರ್ಷದ 100% ಉದ್ಯೋಗಾಧಾರಿತ ಕೋರ್ಸ್ ಆದ ಟೂಲ್ ರೂಮ್ ಮೆಷಿನಿಸ್ಟ್‍ ಗೆ ಪ್ರವೇಶಾತಿ ನಡೆಯುತ್ತಿದೆ.

ಹೆಚ್ಚಿನ ಮಾಹಿತಿಗೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ. 7ಇ, ಕೈಗಾರಿಕಾ ವಲಯ, ಬೈಕಂಪಾಡಿ, ಮಂಗಳೂರು-575011 ಮೊಬೈಲ್ ನಂ: 8073208137, 9008263660, 0824-2408003 ಸಂಪರ್ಕಿಸುವಂತೆ ಜಿ.ಟಿ.ಟಿ.ಸಿ. ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top