ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ 2023ನೇ ಸಾಲಿನ ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ.

Nk

ಅರ್ಜಿ ಸಲ್ಲಿಸುವ ಕ್ರೀಡಾಪಟುಗಳು ಕರ್ನಾಟಕದ ನಿವಾಸಿಯಾಗಿರಬೇಕು, ಅಂತರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಇಂತಹ ಸಂದರ್ಭದಲ್ಲಿ ಕನಿಷ್ಠ ಒಂದು ವರ್ಷ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿರಲೇಬೇಕು ಹಾಗೂ ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದಲ್ಲಿ ವಿದೇಶ ಪ್ರಯಾಣ ರಹದಾರಿ ಪತ್ರ (ಪಾಸ್ಪೋರ್ಟ್ ಕಾಪಿ) ಪ್ರತಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಭಾರತದ ಪ್ರಜೆಯಾಗಿದ್ದು ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಐದು ವರ್ಷ ಕರ್ನಾಟಕವನ್ನು ಪ್ರತಿನಿಧಿಸಿರಬೇಕು. ಮತ್ತು ಕರ್ನಾಟಕದ ನಿವಾಸಿಯಾಗಿರುವ ಬಗ್ಗೆ ದೃಢೀಕರಣ ಪತ್ರವನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನ.

Also Read  ಸಿಎಂ ಸಿದ್ದರಾಮಯ್ಯ ವಿರುದ್ದ ಅವಹೇಳನಕಾರಿ ಪೋಸ್ಟ್ - ಬಿಜೆಪಿ ಕಾರ್ಯಕರ್ತೆ ಅರೆಸ್ಟ್

 

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ, ಸಹಾಯಕ ನಿರ್ದೇಶಕರ ಕಛೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳ ಕ್ರೀಡಾಂಗಣ ಮಂಗಳೂರು ಇಲ್ಲಿಂದ ಪಡೆದು ಭರ್ತಿ ಮಾಡಿದ ಅರ್ಜಿ ನಮೂನೆ ಹಾಗೂ ಕ್ರೀಡಾ ಸಾಧನೆಯ ಬಗ್ಗೆ ಪ್ರಶಸ್ತಿ ಪ್ರಮಾಣ ಪತ್ರಗಳ ದಾಖಲೆಗಳೊಂದಿಗೆ ದೃಢೀಕರಿಸಿ ಅರ್ಜಿಯನ್ನು ಮಂಗಳಾ ಕ್ರೀಡಾಂಗಣ ಕಚೇರಿಗೆ ಸಲ್ಲಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಬಂಟ್ವಾಳ ತಾಲೂಕಿನ ಗ್ರಾಮಗಳ ಗ್ರಾಮಸಭೆ

error: Content is protected !!
Scroll to Top