ಅತಿವೃಷ್ಟಿ- ದಿಢೀರ್ ಏರಿಕೆ ಕಂಡ ಈರುಳ್ಳಿ ಬೆಲೆ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30. ಕರ್ನಾಟಕದಲ್ಲಿ ಮಳೆ ಹೆಚ್ಚಾದ ಪರಿಣಾಮ ಈರುಳ್ಳಿ ಉತ್ಪಾದನೆಯಲ್ಲಿ ಭಾರೀ ಕುಸಿತ ಕಂಡಿದ್ದು, ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬರ್ತಾ ಇಲ್ಲ.‌ ಹೀಗಾಗಿ ಕರ್ನಾಟಕಕ್ಕೆ ಪುಣೆ ಹಾಗೂ ಮಹಾರಾಷ್ಟ್ರದಿಂದ ಈರುಳ್ಳಿ ಆಮದು ಮಾಡಲಾಗುತ್ತಿದ್ದು ಬೆಲೆ ಏರಿಕೆಯಾಗಿದೆ. ಒಂದು ಕೆಜಿ ಈರುಳ್ಳಿಯ ಬೆಲೆ 60ರಿಂದ 70 ರೂಪಾಯಿ ಆಗಿದೆ.‌

ರಾಜ್ಯಕ್ಕೆ ಈ ಮೊದಲು ಉತ್ತರ ಕರ್ನಾಟಕದಿಂದ ಈರುಳ್ಳಿ ಪೂರೈಕೆಯಾಗುತ್ತಿತ್ತು. ಆದರೆ, ಉತ್ತರ ಕರ್ನಾಟಕದಲ್ಲಿ ಮಳೆ ಪರಿಣಾಮ ಹೆಚ್ಚಾಗಿದ್ದು ಈರುಳ್ಳಿ ಬೆಳೆ ಕೊಳೆತು ಹೋಗುತ್ತಿದೆ. ಹೀಗಾಗಿ ಈರುಳ್ಳಿ ಪೂರೈಕೆ ಕಡಿಮೆಯಾಗಿದೆ. ಅತಿವೃಷ್ಟಿಯಿಂದಾಗಿ ಈರುಳ್ಳಿ ಮಾತ್ರವಲ್ಲದೇ ಬೆಳ್ಳುಳ್ಳಿ ದರ ಕೂಡ ಕೆ.ಜಿ.ಗೆ 400 ರೂ.ಗೆ ಏರಿಕೆಯಾಗಿದೆ. ಕಳೆದ ಡಿಸೆಂಬರ್ ಹಾಗೂ ಜನವರಿ ವೇಳೆಗೆ ಬೆಳ್ಳುಳ್ಳಿ ಕೆಜಿಗೆ ದಾಖಲೆಯ 500ವರೆಗೆ ಏರಿಕೆಯಾಗಿ ಬಳಿಕ 280, 250 ರೂ.ವರೆಗೆ ಇಳಿಕೆಯಾಗಿತ್ತು. ಕರ್ನಾಟಕಕ್ಕೆ ಮಧ್ಯಪ್ರದೇಶ ಹಾಗೂ ರಾಜಸ್ಥಾನದಿಂದಲೇ ಬೆಳ್ಳುಳ್ಳಿ ಪೂರೈಕೆಯಾಗುತ್ತಿದೆ. ಆ ರಾಜ್ಯಗಳಲ್ಲಿ ಮಳೆ ಹೆಚ್ಚಾಗಿ ಬೆಳ್ಳುಳ್ಳಿ ಉತ್ಪಾದನೆ ಕುಸಿತವಾಗಿರುವುದೇ ದರ ಹೆಚ್ಚಳಕ್ಕೆ ಕಾರಣ.

Also Read  ರೈಲ್ವೇ ಪ್ರಯಾಣಿಕರರು ಕುಳಿತಲ್ಲೇ ಆಹಾರವನ್ನು ಸೇವಿಸಲು ಹೀಗೆ ಮಾಡಿ

error: Content is protected !!
Scroll to Top