ಛತ್ರಪತಿ ಶಿವಾಜಿ ಪ್ರತಿಮೆ ಕುಸಿತ ಪ್ರತಿಮೆಯ ವಿನ್ಯಾಸಗಾರ ಅರೆಸ್ಟ್  

(ನ್ಯೂಸ್ ಕಡಬ) newskadaba.com ಮುಂಬೈ, ಆ. 30.  ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿದುಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಮೆಯ ವಿನ್ಯಾಸಗಾರ ಚೇತನ್ ಪಾಟೀಲ್ ಅವರನ್ನು ಬಂಧಿಸಲಾಗಿದೆ.

ಶಿವಾಜಿ ಪ್ರತಿಮೆ ಕುಸಿದುಬಿದ್ದ ಘಟನೆಗೆ ಸಂಬಂಧಿಸಿದಂತೆ ಪ್ರತಿಮೆ ನಿರ್ಮಾಣದ ಗುತ್ತಿಗೆದಾರ ಹಾಗೂ ವಿನ್ಯಾಸಗಾರ ಚೇತನ್ ಪಾಟೀಲ್ ವಿರುದ್ಧ ಮಂಗಳವಾರ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅದರಂತೆ ಚೇತನ್ ಪಾಟೀಲ್ ಅವರನ್ನು ಕೊಲ್ಲಾಪುರದಲ್ಲಿ ಗುರುವಾರ ತಡರಾತ್ರಿ ವಶಕ್ಕೆ ಪಡೆಯಲಾಗಿದೆ. ಹೆಚ್ಚಿನ ತನಿಖೆಗಾಗಿ ಸಿಂಧುದುರ್ಗ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಕೊಲ್ಲಾಪುರ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. 35 ಅಡಿ ಎತ್ತರದ ಶಿವಾಜಿ ಮಹಾರಾಜರ ಈ ಪ್ರತಿಮೆಯನ್ನು 2023ರ ಡಿಸೆಂಬರ್ 4ರಂದು ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ್ದರು. ಇದೇ ಆಗಸ್ಟ್ 26ರಂದು ಈ ಪ್ರತಿಮೆ ಕುಸಿದಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ನೇತೃತ್ವದ ಸರ್ಕಾರವನ್ನು ಪ್ರತಿಪಕ್ಷಗಳು ಟೀಕಿಸಿದ್ದವು ಎಂದು ವರದಿ ಪ್ರಕಟಣೆ ತಿಳಿಸಿದೆ.

Also Read  ರತನ್‌ ಟಾಟಾ ಪರಂಪರೆ ಮುಂದುವರಿಸಿಕೊಂಡು ಹೋಗಲು ಟಾಟಾ ಟ್ರಸ್ಟ್ ಅವಿರತವಾಗಿ ಶ್ರಮಿಸಲಿದೆ -ಮುಖ್ಯ ಕಾರ್ಯ ನಿರ್ವಾಹಕ

 

 

error: Content is protected !!
Scroll to Top