ಚಲಿಸುತ್ತಿದ್ದ ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ..!   ಆರೋಪಿ ಅರೆಸ್ಟ್..!           



(ನ್ಯೂಸ್ ಕಡಬ) newskadaba.com ಉಡುಪಿ, ಆ. 30.  ಬೆಂಗಳೂರಿನಿಂದ ಕಾರವಾರಕ್ಕೆ ಚಲಿಸುತ್ತಿದ್ದ ರೈಲಿನಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲ ಭಟ್ಕಳದ ವಿದ್ಯಾರ್ಥಿಯೊಬ್ಬನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.







ಆರೋಪಿಯನ್ನು ಮೊಹಮ್ಮದ್ ಶುರೈಮ್ (22) ಎಂದು ಗುರುತಿಸಲಾಗಿದೆ. ಕಳೆದ ಭಾನುವಾರ ಬೆಳಿಗ್ಗೆ ರೈಲಿನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಭಾನುವಾರ ಮುಂಜಾನೆ ರೈಲು ಸಂಚರಿಸುತ್ತಿದ್ದಾಗಲೇ ಅಸಭ್ಯ ವರ್ತನೆ ತೋರುತ್ತಿದ್ದ ಆರೋಪಿ, ಯುವತಿಯ ಖಾಸಗಿ ಅಂಗಗಳನ್ನು ಮುಟ್ಟಿ ಕಾಮಚೇಷ್ಠೆ ತೀರಿಸಿಕೊಳ್ಳುತ್ತಿದ್ದ ಎನ್ನಲಾಗಿದೆ. ಇನ್ನೇನು ಉಡುಪಿಗೆ ಅರ್ಧ ಗಂಟೆ ಇರುವಾಗ ಮಂಗಳೂರು ಹೊರವಲಯದ ಮುಲ್ಕಿ ಬಳಿ ಯುವತಿಯ ಮೇಲೆ ಎರಗಿ ಮಾನಭಂಗಕ್ಕೆ ಯತ್ನಿಸಿದ್ದಾನೆ ಎಂದು ವರದಿಯಾಗಿದೆ.






 

 

error: Content is protected !!
Scroll to Top