ದ್ವೇಷ ಸೃಷ್ಟಿಸುವ ಹೇಳಿಕೆಗಳ ಅಡಿಯಲ್ಲಿ ಪ್ರಕರಣ ದಾಖಲು ಬಿವೈ ವಿಜಯೇಂದ್ರ ವಿರುದ್ಧ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30.  ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ನಗರದ ಹೈಗ್ರೌಂಡ್ಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ ನೀಡಿದೆ.

ಪ್ರಕರಣ ರದ್ದು ಪಡಿಸುವಂತೆ ಬಿ.ವೈ.ವಿಜಯೇಂದ್ರ ಅರ್ಜಿ ಸಲ್ಲಿಸಿದ್ದರು, ಇಂದು ವಿಚಾರಣೆ ನಡೆಸಿದ ನ್ಯಾ. ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಎಫ್‌ಐಆರ್‌ಗೆ ತಡೆ ನೀಡಿ ವಿಚಾರಣೆಯನ್ನು ಸೆ.19ಕ್ಕೆ ಮುಂದೂಡಿತು. ಮೀಸಲಾತಿಗೆ ಸಂಬಂಧಿಸಿದಂತೆ ವಿಡಿಯೊ ತುಣುಕನ್ನು ಬಿಜೆಪಿ ರಾಜ್ಯ ಘಟಕದ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿತ್ತು. ಜನ ಪ್ರತಿನಿಧಿಗಳ ಕಾಯ್ದೆ ಹಾಗೂ ಸೆಕ್ಷನ್ 505 (2) ವರ್ಗಗಳ ನಡುವೆ ದ್ವೇಷ ಸೃಷ್ಟಿಸುವ ಅಥವಾ ಉತ್ತೇಜಿಸುವ ಹೇಳಿಕೆಗಳು ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ವರದಿ ಪ್ರಕಟಣೆ ತಿಳಿಸಿದೆ.

Also Read  ಒಮಿಕ್ರಾನ್ ಭೀತಿಯ ಹಿನ್ನೆಲೆ ➤ ವಿದೇಶದಿಂದ ಮಂಗಳೂರಿಗೆ ಬಂದಿಳಿದ ನಾಲ್ವರ ಪರೀಕ್ಷೆ

 

error: Content is protected !!
Scroll to Top