ಪೋಕ್ಸೋ ಪ್ರಕರಣ- ಬಿಎಸ್ ಯಡಿಯೂರಪ್ಪಗೆ ಹೈಕೋರ್ಟ್ ಏಕಸದಸ್ಯ ಪೀಠ ತಾತ್ಕಾಲಿಕ ರಿಲೀಫ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30.  ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ತಾತ್ಕಾಲಿಕ ರಿಲೀಫ್ ನೀಡಿದೆ.

ಬಿಎಸ್​ವೈ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ. ಬಿಎಸ್​ವೈ ಬಂಧಿಸದಂತೆ ನೀಡಿದ್ದ ಮಧ್ಯಂತರ ಆದೇಶವನ್ನೂ ಮುಂದುವರಿಸಿದೆ. ಸಿಐಡಿ ಮನವಿ ಮೇರೆಗೆ ಹೈಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ ಮಾಡಿತು ಎನ್ನಲಾಗಿದೆ.

 

 

error: Content is protected !!
Scroll to Top