ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್  ಸಚಿವ ಹೆಚ್.ಡಿ.ರೇವಣ್ಣಗೆ ಮಧ್ಯಂತರ ರಿಲೀಫ್ ನೀಡಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30.  ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರಿಗೆ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿದೆ.

ಪ್ರಕರಣ ರದ್ದುಗೊಳಿಸುವಂತೆ ಹೆಚ್.ಡಿ.ರೇವಣ್ಣ ಕೋರಿದ್ದ ಅರ್ಜಿ ವಿಚಾರಣೆಯನ್ನು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿದ್ದು, ಸೆಪ್ಟೆಂಬರ್ 19ರವರೆಗೆ ಯಾವುದೇ ಪ್ರಕ್ರಿಯೆ ನಡೆಸದಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚನೆ ನೀಡಿದೆ. ಹೆಚ್‌ಡಿ ರೇವಣ್ಣ ಪರ ವಾದ ಮಂಡಿಸಿದ ವಕೀಲರು, ಕಲಂ 354A, 354D ಅಡಿ ಹಳೆಯ ದೂರುಗಳಿಗೆ ಎಫ್‌ಐಆರ್ ದಾಖಲು ಮಾಡುವಂತಿಲ್ಲ. 4 ವರ್ಷಗಳ ಹಿಂದಿನ ದೂರಿಗೆ ಈಗ ಎಫ್‌ಐಆರ್ ದಾಖಲು ಮಾಡಲಾಗಿದೆ. ಐಪಿಸಿ ಸೆಕ್ಷನ್ 506, 509 ದೂರಿನಲ್ಲಿರುವ ಅಂಶಗಳಿಗೆ ಅನ್ವಯವಾಗುವುದಿಲ್ಲ. ಆದ್ದರಿಂದ ಎಫ್‌ಐಆರ್ ರದ್ದುಗೊಳಿಸುವಂತೆ ಮನವಿ ಮಾಡಿದರು ಎನ್ನಲಾಗಿದೆ.

Also Read  ಇದು ನನ್ನ ಕೊನೆಯ ಚುನಾವಣೆ ➤ ಜಗದೀಶ್ ಶೆಟ್ಟರ್ ಘೋಷಣೆ

 

error: Content is protected !!
Scroll to Top