ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಡ್ಯಾನ್ಸ್ ಮಾಡುತ್ತಿದ್ದ ವೇಳೆ ಕುಸಿದುಬಿದ್ದು ಕಾನ್ಸ್ಟೇಬಲ್ ಮೃತ್ಯು – News Kadaba

ಡ್ಯಾನ್ಸ್ ಮಾಡುತ್ತಿದ್ದ ವೇಳೆ ಕುಸಿದುಬಿದ್ದು ಕಾನ್ಸ್ಟೇಬಲ್ ಮೃತ್ಯು

(ನ್ಯೂಸ್ ಕಡಬ) newskadaba.com ದೆಹಲಿ, ಆ. 30. ಡ್ಯಾನ್ಸ್ ಮಾಡುತ್ತಿರುವಾಗಲೇ ಹೆಡ್ ಕಾನ್ ಸ್ಟೇಬಲ್ ಓರ್ವ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಉತ್ತರ ದೆಹಲಿಯ ರೂಪನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಮೃತರನ್ನು ರವಿಕುಮಾರ್ ಎಂದು ಗುರುತಿಸಲಾಗಿದೆ. ಸಾವಿಗೂ ಕೆಲ ನಿಮಿಷಗಳ ಮುಂಚೆ ಕಾನ್‌ಸ್ಟೆಬಲ್ ಡ್ಯಾನ್ಸ್ ಮಾಡಿದ್ದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದೆಹಲಿಯ ರೂಪನಗರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ ಸ್ಟೆಬಲ್ ಆಗಿ ಕೆಲಸ ಮಾಡುತ್ತಿದ್ದ ರವಿಕುಮಾರ್ ಸ್ಟೇಷನ್ ಹೌಸ್ ಆಫೀಸರ್ ಆಗಿ ವರ್ಗಾವಣೆಯಾಗಿದ್ದು, ಬೀಳ್ಕೊಡುಗೆ ಪಾರ್ಟಿ ಆಯೋಜಿಸಿದ್ದರು. ಈ ವೇಳೆ ಡ್ಯಾನ್ಸ್ ಮಾಡುತ್ತಿದ್ದ ಅವರು ಇದ್ದಕ್ಕಿದ್ದಂತೆ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣ ಸಹ ಸಿಬ್ಬಂದಿಗಳು ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ತಪಾಸಣೆ ನಡೆಸಿದ ವೈದ್ಯರು ರವಿಕುಮಾರ್ ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

Scroll to Top