ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್- ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. 2024-2025ನೇ ಸಾಲಿನಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ನಗರದ ಬೊಂದೇಲ್‍ ನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ ನ ಡಿಪ್ಲೋಮಾ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇಂಗ್ಲೀಷ್ ಮತ್ತು ಕನ್ನಡ) ಹಾಗೂ ಲೈಬ್ರೆರಿ ಅಂಡ್ ಇನ್‍ಫಾರ್ಮೇಶನ್ ಸೈನ್ಸ್ ಕೋರ್ಸ್‍ ಗಳಿಗೆ ಸೇರಲು ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಹಾಗೂ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ/3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸಿನ ಪ್ರವೇಶಕ್ಕೆ 2 ವರ್ಷಗಳ ಐ.ಟಿ.ಐ/ದ್ವಿತೀಯ ಪಿ.ಯು.ಸಿ(ವಿಜ್ಞಾನ)/ದ್ವಿತೀಯ ಪಿ.ಯು.ಸಿ. (ತಾಂತ್ರಿಕವಿಷಯಗಳಲ್ಲಿ) ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು.

Also Read  ಮಂಗಳೂರು :ಲಾಕ್ ಡೌನ್ ನಂತರ ಕಾಲೇಜು ಆರಂಭ ➤ ಹೆಚ್ಚಿನ ವಿದ್ಯಾರ್ಥಿಗಳು ಗೈರು

ಅರ್ಜಿ ಸಲ್ಲಿಸಲು ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್, ಬೊಂದೇಲ್, ಮಂಗಳೂರು ಸಂಪರ್ಕಿಸಿ, ನೇರವಾಗಿ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದು. ಅರ್ಜಿ ನಮೂನೆಯನ್ನು ಪಡೆಯಲು ಹಾಗೂ ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಸೆಪ್ಟೆಂಬರ್ 6 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ: 0824-2482334, 9611320910, 9844744845ನ್ನು ಸಂಪರ್ಕಿಸುವಂತೆ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್, ಪ್ರಾಶುಂಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top