ಕ್ರೀಡಾಪಟು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಪದಕ ಪಡೆದ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ  ಭಾರತ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಗೆ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಿ ವಿಜೇತರಾದ ಕ್ರೀಡಾಪಟುಗಳಿಗೆ 2024-25ನೇ ಸಾಲಿನ ಶೈಕ್ಷಣಿಕ ಶುಲ್ಕವನ್ನು ಇಲಾಖೆಯಿಂದ ಮರುಪಾವತಿ ಮಾಡುವ ಮೂಲಕ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಫೀ ರಶೀದಿಗಳನ್ನು ನೀಡುವಾಗ ಕೇವಲ Tuitions Fee  ಎಂದು ನಮೂದಿಸಿ ಸಲ್ಲಿಸಿದಲ್ಲಿ ಅಂತಹ ಫೀ ರಶೀದಿಗಳನ್ನು ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಪರಿಗಣಿಸುವುದಿಲ್ಲ. ಪ್ರವೇಶ ಶುಲ್ಕದ ವಿವರಗಳನ್ನು Bifurcation ಮಾಡಿ ಪ್ರಾಂಶುಪಾಲರಿಂದ ದೃಢೀಕರಿಸಿ ಸಲ್ಲಿಸಬೇಕು. ಆಯಾ ವರ್ಷದ ಶೈಕ್ಷಣಿಕ ಶುಲ್ಕವನ್ನು ಹಿಂದಿನ 5 ವರ್ಷಗಳ ಕ್ರೀಡಾ ಸಾಧನೆಯನ್ನು ಪರಿಗಣಿಸಿ ನೀಡಲಾಗುತ್ತದೆ.

ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಪ್ರತಿನಿಧಿಸಿ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕ ಪಡೆದ ಪ್ರಥಮ ಪಿಯುಸಿಯಿಂದ ಸ್ನಾತಕೋತರ ಪದವಿ (ವೃತ್ತಿಪರ ಕೋರ್ಸುಗಳನ್ನೊಳಗೊಂಡಂತೆ) ವ್ಯಾಸಂಗ ಮಾಡುತ್ತಿರುವ ಕೇಂದ್ರ ರಾಜ್ಯ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲಾ ಕಾಲೇಜುಗಳ ಕ್ರೀಡಾ ವಿದ್ಯಾರ್ಥಿಗಳು ಅರ್ಹರಿರುತ್ತಾರೆ.

ಯಾವುದೇ ಆಹ್ವಾನ ಕ್ರೀಡಾಕೂಟಗಳಲ್ಲಿ ಭಾಗವಹಿಸಿರುವ ಕ್ರೀಡಾಪಟುಗಳು ಈ ಯೋಜನೆಗೆ ಅರ್ಹರಿರುವುದಿಲ್ಲ. ವಿಕಲಚೇತನ ಕ್ರೀಡಾಪಟುಗಳಿಗೂ ಇದೇ ಮಾನದಂಡ ಅನ್ವಯಿಸುತ್ತದೆ. ವಿಕಲಚೇತನ ಕ್ರೀಡಾಪಟುಗಳು ಕಡ್ಡಾಯವಾಗಿ ಸರ್ಕಾರಿ ವೈದ್ಯರಿಂದ ವೈದ್ಯಕೀಯ ಪ್ರಮಾಣ ಪತ್ರಗಳನ್ನು ಲಗತ್ತಿಸತಕ್ಕದ್ದು. ಭರ್ತಿ ಮಾಡಿದ ಅರ್ಜಿಯನ್ನು ದೃಢೀಕೃತ ದಾಖಲೆಗಳೊಂದಿಗೆ ಸೆಪ್ಟೆಂಬರ್ 22 ರೊಳಗೆ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳ ಕ್ರೀಡಾಂಗಣ ಇಲ್ಲಿಗೆ ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group