ಚಂದ್ರಯಾನ- 3 ಯಶಸ್ಸಿನ ಸ್ಮರಣಾರ್ಥ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ   ಇಸ್ರೋ ವಿಜ್ಞಾನಿಗಳಿಂದ ಉಪನ್ಯಾಸ

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಆ. 31.  ಚಂದ್ರಯಾನ-3ರ ಯಶಸ್ಸಿನ ಸ್ಮರಣಾರ್ಥ ಚಿತ್ರದುರ್ಗದಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಇಸ್ರೋ ವಿಜ್ಞಾನಿ ಶ್ರೀನಾಥ್ ರತ್ನಾಕರ್ ಅವರು ಬಾಹ್ಯಾಕಾಶ ವಿಜ್ಞಾನ ವಿಕಾಸ, ಅಭಿವೃದ್ಧಿ ಮತ್ತು ಭವಿಷ್ಯ ಕುರಿತು ಉಪನ್ಯಾಸ ನೀಡಲಿದ್ದಾರೆ.

ದೇವರಾಜ ಅರಸು ಎಜುಕೇಶನ್ ಸೊಸೈಟಿ, ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಮತ್ತು ಸದ್ಗುರು ಆಯುರ್ವೇದ ಸಹಯೋಗದಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ಸರ್ಕಾರಿ ಶಾಲೆಗಳ ವಿಜ್ಞಾನ ಶಿಕ್ಷಕರು ಹಾಗೂ ದೇವರಾಜ ಅರಸು ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ದೇವರಾಜ ಅರಸು ಶಿಕ್ಷಣ ಸೊಸೈಟಿ ಸಿಇಒ ಎಂಸಿ ರಘು ಚಂದನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾಧಿಕಾರಿ ಟಿ ವೆಂಕಟೇಶ್ ಉದ್ಘಾಟಿಸಲಿದ್ದಾರೆ. ಬಾಹ್ಯಾಕಾಶ ಕುರಿತ ಉಪನ್ಯಾಸದ ಹೊರತಾಗಿ, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ವಿಜ್ಞಾನಿಗಳ ನಡುವೆ ಸಂವಾದ ನಡೆಯಲಿದೆ ಎನ್ನಲಾಗಿದೆ.

Also Read  ರಾಷ್ಟ್ರೀಯ ಮಟ್ಟದಲ್ಲಿ ಸರ್ಫಿಂಗ್ ಆಗುವ ಕಡಲ ತೀರದಲ್ಲಿ ಫಿಶ್ ಮಿಲ್ ಗಳ ಮಾಲಿನ್ಯ

 

error: Content is protected !!
Scroll to Top