(ನ್ಯೂಸ್ ಕಡಬ) newskadaba.com ಸುಳ್ಯ, ಫೆ.26. ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್‌ಟೇಬಲ್ ಓರ್ವರು ಅನಾರೋಗ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ.
ಮೃತರನ್ನು ಸುಳ್ಯ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಮಾಧವ ವೈ ಎಂದು ಗುರುತಿಸಲಾಗಿದ್ದು, ಅನಾರೋಗ್ಯದ ನಿಮಿತ್ತ ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.