(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ವಿದ್ಯುತ್ ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಬೆಸ್ಕಾಂ ಎಚ್ಚರಿಕೆ ನೀಡಿದೆ.
ಸೆ. 01ರಿಂದ ಕಟ್ಟುನಿಟ್ಟಾಗಿ ಈ ನಿಯಮವನ್ನು ಪಾಲಿಸಲು ನಿರ್ಧರಿಸಿರುವ ಬೆಸ್ಕಾಂ, ಗೃಹ ಮತ್ತು ವಾಣಿಜ್ಯ ಬಳಕೆದಾರರು, ಅಪಾರ್ಟ್ಮೆಂಟ್ ಗಳು ಹಾಗೂ ತಾತ್ಕಲಿಕ ವಿದ್ಯುತ್ ಸಂಪರ್ಕ ಪಡೆದ ಗ್ರಾಹಕರು ನಿಗದಿತ 30 ದಿನದೊಳಗೆ ಬಿಲ್ ಪಾವತಿಸದಿದ್ದಲ್ಲಿ ಮೀಟರ್ ರೀಡಿಂಗ್ಗೆ ಬರುವ ದಿನ ಅಂದರೆ ಪ್ರತೀ ತಿಂಗಳ ಮೊದಲ 15 ದಿನದಲ್ಲೇ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು. ಹಾಗಾಗಿ, ಗ್ರಾಹಕರು ಸಕಾಲದಲ್ಲಿ ಶುಲ್ಕ ಪಾವತಿಸುವಂತೆ ಬೆಸ್ಕಾಂ ತಿಳಿಸಿದೆ.