(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. ಸ್ಟೇಟ್ ಬ್ಯಾಂಕ್ ಬಳಿ 93 ಬೀದಿ ವ್ಯಾಪಾರಿಗಳಿಗೆ ಗುರುತಿನ ಚೀಟಿಯನ್ನು ಇಂದು ವಿತರಿಸಲಾಗುತ್ತಿದ್ದು, ಎಲ್ಲಾ 667 ಬೀದಿ ಬದಿ ವ್ಯಾಪಾರಿಗಳಿಗೆ ಹಂತ ಹಂತವಾಗಿ ವಿವಿಧ ವಲಯಗಳಲ್ಲಿ ವ್ಯಾಪಾರ ನಡೆಸಲು ಅವಕಾಶ ನೀಡಲಾಗುವುದು ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಘೋಷಿಸಿದ್ದಾರೆ.
ಮೇಯರ್ ಕಚೇರಿಯಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ‘ಆಪರೇಷನ್ ಟೈಗರ್’ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಫುಟ್‌ಪಾತ್‌ಗಳಲ್ಲಿ ಬೀದಿಬದಿ ವ್ಯಾಪಾರಕ್ಕೆ ಅನುಮತಿ ನೀಡುವುದಿಲ್ಲ. ಆಪರೇಷನ್ ಟೈಗರ್ ಒಂದು ವರ್ಷಕ್ಕೆ ಒಪ್ಪಂದ ಮಾಡಿಕೊಂಡಿದ್ದು, ಮುಂದುವರೆಯಲಿದೆ ಎಂದು ಮೇಯರ್ ತಿಳಿಸಿದ್ದಾರೆ. ಅವರಿಗೆ ಅಂಗಡಿಗಳ ಜೊತೆಗೆ ನೀರು ಮತ್ತು ವಿದ್ಯುತ್ ಪೂರೈಕೆಯನ್ನು ಒದಗಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.