ರಾಜಭವನ ಛಲೋ- ರಾಜ್ಯಪಾಲರ ಭೇಟಿಯಾದ ಕಾಂಗ್ರೆಸ್ ಮುಖಂಡರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಖಂಡಿಸಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ರಾಜಭವನ ಚಲೋ ನಡೆಸಿದ ಕಾಂಗ್ರೆಸ್ ಮುಖಂಡರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದರು.

ಈ ಸಂದರ್ಭ ರಾಜ್ಯಪಾಲರು, ಬೇರೆಯವರ ದೂರಿನ ಆಧಾರದ ಮೇಲೆ ನಾನು ತನಿಖೆಗೆ ಅನುಮತಿ ನೀಡಿದ್ದೇನೆ. ನಾನಾಗಿಯೇ ನೀಡಿಲ್ಲ ಎಂದು ಸಮರ್ಥಿಸಿದ್ದಾರೆ. ಬಾಕಿ ಉಳಿದ ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸುವುದಾಗಿ ರಾಜ್ಯಪಾಲರು ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Also Read  ಭೀಕರ ರಸ್ತೆ ಅಪಘಾತ ➤ ಯುವಕ ಸ್ಥಳದಲ್ಲೇ ಮೃತ್ಯು..!

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ, ನಂತರ ರಾಜಭವನಕ್ಕೆ ಪಾದಯಾತ್ರೆ ನಡೆಸಿದರು. ಪಾದಯಾತ್ರೆಯಲ್ಲಿ ಸಚಿವರು, ಶಾಸಕರು, ವಿಧಾನಪರಿಷತ್‌ ಸದಸ್ಯರು ಮತ್ತು ಮಾಜಿ ಸಂಸದ ವೀರಪ್ಪ ಮೊಯ್ಲಿ ಸೇರಿದಂತೆ ಹಲವು ಕಾಂಗ್ರೆಸ್‌ ಮುಖಂಡರು ಭಾಗವಹಿಸಿದ್ದರು. ಇನ್ನೊಂದೆಡೆ ಹೈಕೋರ್ಟ್‌ನಲ್ಲಿ ಸಿ ಎಂ ಸಿದ್ದರಾಮಯ್ಯ ಅವರ ಅರ್ಜಿಯ ವಿಚಾರಣೆ ಮುಂದುವರಿದಿದೆ. ರಾಜ್ಯಪಾಲರ ಪರವಾಗಿ ಹಿರಿಯ ನ್ಯಾಯವಾದಿ ತುಷಾರ್‌ ಮೆಹ್ತಾ ವಾದ ಮಂಡಿಸುತ್ತಿದ್ದಾರೆ.

error: Content is protected !!
Scroll to Top