ಕುಡಿದ ಮತ್ತಿನಲ್ಲಿ ವಾಹನ ಚಾಲನೆ- 297 ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, . 31. ವಿಶೇಷ ವಾಹನ ತಪಾಸಣೆ ಕಾರ್ಯಾಚರಣೆಯನ್ನು ಕೈಗೊಂಡಿರುವ ನಗರ ಸಂಚಾರಿ ಪೊಲೀಸರು ಡ್ರಿಂಕ್ & ಡ್ರೈವ್ ಪ್ರಕರಣದಡಿ ವಾಹನ ಚಲಾಯಿಸುತ್ತಿದ್ದ ಚಾಲಕರು ಹಾಗೂ ಸವಾರರ ವಿರುದ್ಧ ಒಟ್ಟು 297 ಪ್ರಕರಣಗಳನ್ನು ದಾಖಲಿಸಿಕೊಂಡಿರುವುದಾಗಿ ವರದಿಯಾಗಿದೆ.

ನಗರದಾದ್ಯಂತ ನಡೆಸಿದ್ದ ಈ ವಿಶೇಷ ಕಾರ್ಯಾಚರಣೆಯಲ್ಲಿ 50 ಸಂಚಾರಿ ಠಾಣೆಗಳ 84 ಅಧಿಕಾರಿಗಳು ಹಾಗೂ 392 ಸಿಬ್ಬಂದಿಗಳು ಕಾರ್ಯಾಚರಣೆ ಕೈಗೊಂಡು 16,483 ವಾಹನಗಳನ್ನು ಪರಿಶೀಲಿಸಿ 297 ಪ್ರಕರಣಗಳನ್ನು ದಾಖಲಿಸಿಕೊಂಡಿರುವುದಾಗಿ ತಿಳಿದುಬಂದಿದೆ. ನಗರದಲ್ಲಿ ರಸ್ತೆ ಸುರಕ್ಷತೆಗಾಗಿ ಮುಂದಿನ ದಿನಗಳಲ್ಲಿಯೂ ಇಂತಹ ಕಾರ್ಯಾಚರಣೆಯನ್ನು ಹಮಿಕೊಳ್ಳಲಾಗುವುದು ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

error: Content is protected !!
Scroll to Top