ಸೆ.1 ರಂದು ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರಿಗೆ 10 ಲಕ್ಷ ರೂಪಾಯಿ ಉಚಿತ ವಿಮಾ ಯೋಜನೆಯ ನೋಂದಾವಣೆ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31.  ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಸಹಯೋಗದಲ್ಲಿ ಅಂಚೆ ಇಲಾಖೆ ಸಹಾಭಾಗಿತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ 10 ಲಕ್ಷ ರೂಪಾಯಿ ಉಚಿತ ವಿಮಾ ಯೋಜನೆಯ ನೋಂದಾವಣೆ ಶಿಬಿರ ಸೆಪ್ಟೆಂಬರ್ 1 ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರು ಪತ್ರಿಕಾ ಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಅಂಚೆ ಇಲಾಖೆಯ ಮಂಗಳೂರು ವಿಭಾಗದ ಹಿರಿಯ ಅಧೀಕ್ಷಕರಾಗಿರುವ ಎಂ ಸುಧಾಕರ ಮಲ್ಯ ನೆರವೇರಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳು ಮತ್ತು ಗೌರವ ಉಪಸ್ಥಿತರಿರುತ್ತಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಪಾದಚಾರಿಗೆ ಲಾರಿ ಢಿಕ್ಕಿ ➤ ವ್ಯಕ್ತಿ ಸ್ಥಳದಲ್ಲೇ ಮೃತ್ಯು

 

error: Content is protected !!
Scroll to Top