ಆಸ್ಟ್ರೇಲಿಯಾ ವಿರುದ್ಧ ಸರಣಿ- ಭಾರತ U-19 ತಂಡದಲ್ಲಿ ಸ್ಥಾನ ಪಡೆದ ರಾಹುಲ್ ದ್ರಾವಿಡ್ ಪುತ್ರ ಸಮಿತ್

(ನ್ಯೂಸ್ ಕಡಬ) newskadaba.com ಮುಂಬೈ, ಆ. 31.  ಸೆಪ್ಟೆಂಬರ್ ಮತ್ತು ಅಕ್ಟೋಬರ್ ನಲ್ಲಿ ಸ್ವದೇಶದಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಬಹು-ಫಾರ್ಮ್ಯಾಟ್ ಸರಣಿಗಾಗಿ ಭಾರತ U-19 ತಂಡದಲ್ಲಿ ಭಾರತದ ಮಾಜಿ ಮುಖ್ಯ ಕೋಚ್ ಮತ್ತು ನಾಯಕ ರಾಹುಲ್ ದ್ರಾವಿಡ್ ಅವರ ಪುತ್ರ ಆಲ್‌ರೌಂಡರ್ ಸಮಿತ್ ದ್ರಾವಿಡ್ ಸ್ಥಾನ ಪಡೆದಿದ್ದಾರೆ.

ಸೆಪ್ಟೆಂಬರ್ 21, 23 ಮತ್ತು 26 ರಂದು ಪುದುಚೇರಿಯಲ್ಲಿ 50-ಓವರ್‌ಗಳ ಮೂರು ಪಂದ್ಯಗಳಲ್ಲಿ ಆಸ್ಟ್ರೇಲಿಯಾ U-19 ತಂಡವನ್ನು ಭಾರತದ U-19 ತಂಡ ಎದುರಿಸಲಿದೆ. ನಂತರ ಚೆನ್ನೈನಲ್ಲಿ ಸೆಪ್ಟೆಂಬರ್ 30 ಮತ್ತು ಅಕ್ಟೋಬರ್ 7 ರಂದು ಎರಡು ನಾಲ್ಕು ದಿನಗಳ ಪಂದ್ಯಗಳು ನಡೆಯಲಿವೆ. ಉತ್ತರ ಪ್ರದೇಶದ ಮಧ್ಯಮ ಕ್ರಮಾಂಕದ ಮೊಹಮ್ಮದ್ ಅಮಾನ್ ಅವರನ್ನು 50 ಓವರ್‌ಗಳ ತಂಡದ ನಾಯಕರನ್ನಾಗಿ ನೇಮಿಸಲಾಗಿದ್ದು, ಮಧ್ಯಪ್ರದೇಶದ ಸೋಹಮ್ ಪಟವರ್ಧನ್ ನಾಲ್ಕು ದಿನಗಳ ಪಂದ್ಯಗಳಿಗೆ ತಂಡವನ್ನು ಮುನ್ನಡೆಸಲಿದ್ದಾರೆ ಎನ್ನಲಾಗಿದೆ.

Also Read  ಇಂದಿನಿಂದ ರಾಜ್ಯಾದ್ಯಂತ SSLC ಪರೀಕ್ಷೆ ಆರಂಭ ➤ 3,305 ಪರೀಕ್ಷಾ ಕೇಂದ್ರಗಳಲ್ಲೂ ಸಕಲ ಸಿದ್ಧತೆ

 

error: Content is protected !!
Scroll to Top