(ನ್ಯೂಸ್ ಕಡಬ) newskadaba.com ನವದೆಹಲಿ, ಆ. 31. ಸೂರ್ಯಕುಮಾರ್ ಯಾದವ್ ಅವರು ಬುಚ್ಚಿ ಬಾಬು ಪಂದ್ಯಾವಳಿಯಲ್ಲಿ ಮುಂಬೈ ತಂಡದ ಪರವಾಗಿ ಆಟವಾಡುತ್ತಿದ್ದಾರೆ. ತಮಿಳನಾಡು ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವ ವೇಳೆ ಕೈಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಪಂದ್ಯದ ಮುನ್ನವೇ ಸೂರ್ಯಕುಮಾರ್ ಯಾದವ್ ಅವರ ಕೈಗೆ ಗಾಯವಾಗಿದೆ. ಜೊತೆಗೆ ಸೆ.5 ರಿಂದ ನಡೆಯಲಿರುವ ದುಲೀಪ್ ಟ್ರೋಫಿಯಲ್ಲೂ ಅವರ ಹೆಸರಿದೆ. ಇನ್ನು ಸೂರ್ಯಕುಮಾರ್ ಯಾದವ್ ಅವರ ಕೈ ಗಾಯ ಯಾವ ಪ್ರಮಾಣದ್ದು ಎಂಬುದು ತಿಳಿದುಬಂದಿಲ್ಲ. ಈವರೆಗೂ ಬಿಸಿಸಿಐ ಸೂರ್ಯಕುಮಾರ್ ಗಾಯದ ಬಗ್ಗೆ ಯಾವುದೇ ಮಾಹಿತಿಯನ್ನೂ ನೀಡಿಲ್ಲ ಎಂದು ವರದಿಯಾಗಿದೆ.
Also Read ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಚಿಂತನ್ 'ರಾಜ್ಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆ'ಗೆ ಆಯ್ಕೆ