28 ತಿಂಗಳ ಹೆಣ್ಣು ಹುಲಿಯನ್ನು ದತ್ತು ಪಡೆದ ನಟಿ ಸಂಯುಕ್ತ ಹೊರನಾಡು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31.  ನಟಿ ಸಂಯುಕ್ತ ಹೊರನಾಡು ಅವರು ತಮ್ಮದೇ ಪ್ರಾಣ ಅನಿಮಲ್ ಫೌಂಡೇಶನ್ ಹಾಗೂ ಟೆಕೆಯಾನ್ ಸಹಯೋಗದಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 28 ತಿಂಗಳ ಹೆಣ್ಣು ಹುಲಿಯನ್ನು ದತ್ತು ಪಡೆದಿದ್ದಾರೆ ಎನ್ನಲಾಗಿದೆ.

ಸಂಯುಕ್ತ ಅವರು 2.5 ವರ್ಷದ ಸಿಂಚನ ಎಂಬ ಹೆಣ್ಣು ಹುಲಿ ಮರಿಯನ್ನು ದತ್ತು ಪಡೆದಿದ್ದಾರೆ. ಈ ಹುಲಿಯು ನರದೌರ್ಬಲ್ಯ ಸಮಸ್ಯೆ ಎದುರಿಸುತ್ತಿರುವುದರಿಂದ ಕಾಡಿನಲ್ಲಿ ಸ್ವಾತಂತ್ರ‍್ಯವಾಗಿ ವಾಸಿಸಲು ಕಷ್ಟ ಸಾಧ್ಯವಾಗಿರುವುದರಿಂದ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಂರಕ್ಷಣಾ ಕೇಂದ್ರದಲ್ಲಿ ನೋಡಿಕೊಳ್ಳಲಾಗುತ್ತಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಸಂಯುಕ್ತ ಹೊರನಾಡು ಅವರು, ಟೆಕೆಯಾನ್ ಜೊತೆ ಕೈ ಜೋಡಿಸಿರುವುದು ಖುಷಿ ತಂದಿದೆ. ತೊಂದರೆ ಒಳಗಾದ ಪ್ರಾಣಿಗಳನ್ನು ದತ್ತು ಸ್ವೀಕರಿಸದಕ್ಕೆ ಟೆಕೆಯಾನ್ ಗೆ ಧನ್ಯವಾದ ಎಂದು ಹೇಳಿದರು.

Also Read  ಮಂಗಳೂರು: ಚುನಾವಣೆ ಹಿನ್ನೆಲೆ ➤ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಿಂದ ಮಹತ್ವದ ಸಲಹೆ..!

 

error: Content is protected !!
Scroll to Top