ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪೂಜಿಸುವಂತೆ ಸಚಿವ ಈಶ್ವರ ಖಂಡ್ರೆ ಮನವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ಗಣಪತಿ ದೇವರನ್ನು ಪೂಜಿಸುವ ನಾವು ಪ್ರಕೃತಿ ಹಾಗೂ ಪರಿಸರವನ್ನೂ ಉಳಿಸಬೇಕು. ಹಾಗಾಗಿ ಈ ಬಾರಿ ಬಣ್ಣ ರಹಿತ ಮಣ್ಣಿನ ವಿನಾಯಕ ಮೂರ್ತಿಯನ್ನು ಮಾತ್ರ ಪೂಜಿಸಿ ಎಂದು ಅರಣ್ಯ, ಜೀವಿಶಾಸ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮನವಿ ಮಾಡಿದ್ದಾರೆ.

ವರ್ಷ ದೇಶದಾದ್ಯಂತ ಸುರಿದ ಧಾರಾಕಾರ ಮಳೆಯಿಂದಾಗಿ ಹಲವು ಕಡೆ ಭೂ ಕುಸಿತ ಉಂಟಾಗಿ ಅನಾಹುತಗಳು ಸಂಭವಿಸಿವೆ. ಹೀಗಾಗಿ ಪ್ರಕೃತಿ ಹಾಗೂ ಪರಿಸರ ಸಂರಕ್ಷಣೆಯ ಹೊಣೆ ಹಿಂದೆಂದಿಗಿಂತಲೂ ಈಗ ಹೆಚ್ಚಾಗಿದೆ. ಬಾರಿಯ ಗಣೇಶೋತ್ಸವವನ್ನು ಪರಿಸರ ಸ್ನೇಹಿಯಾಗಿ ಆಚರಿಸೋಣ. ಪ್ರಕೃತಿ ವಿಕೋಪ ನಿವಾರಕ, ನಮ್ಮ ಪರಿಸರ ವಿನಾಯಕನನ್ನು ಬಣ್ಣ ರಹಿತ ಮಣ್ಣಿನ ಮೂರ್ತಿಗಳ ರೂಪದಲ್ಲಿ ಪೂಜಿಸೋಣ ಎಂದು ಅವರು ಸಂದೇಶ ನೀಡಿದ್ದಾರೆ.

Also Read  ಸುಬ್ರಹ್ಮಣ್ಯ: ಅಪರಿಚಿತ ಮಹಿಳೆಯ ಶವ ಪತ್ತೆ

ಹಬ್ಬದ ಸಂಭ್ರಮದಲ್ಲಿ, ಗಣೇಶನ ಮೆರವಣಿಗೆಯ ವೇಳೆ ಹಸಿರು ಪಟಾಕಿಯನ್ನೇ ಹಚ್ಚಬೇಕು. ಶಬ್ದ ಮಾಲಿನ್ಯ ಆಗದಂತೆ ಧ್ವನಿವರ್ಧಕ ಬಳಸಬೇಕು ಜೊತೆಗೆ ಜಲ ಮಾಲಿನ್ಯ, ವಾಯು ಮಾಲಿನ್ಯ, ಶಬ್ದ ಮಾಲಿನ್ಯ ತಡೆಯಬೇಕು ಎಂದು ಅವರು ನಾಡಿನ ಜನತೆಗೆ ಮನವಿ ಮಾಡಿದ್ದಾರೆ. ಎಲ್ಲ ಗಣೇಶೋತ್ಸವ ಸಮಿತಿಗಳಿಂದ ಮಣ್ಣಿನ ಗಣೇಶ ಮೂರ್ತಿಯನ್ನು ಮಾತ್ರ ವಿಸರ್ಜನೆ ಮಾಡುವುದಾಗಿ ಮುಚ್ಚಳಿಕೆ ಬರೆಸಿಕೊಂಡು ಪೆಂಡಾಲ್‌ ಗೆ ಅನುಮತಿ ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

error: Content is protected !!
Scroll to Top