(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ಇಲ್ಲಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ದಾಳಿ ನಡೆಸಿದ ಎನ್ಐಎ ಅಧಿಕಾರಿಗಳು ಓರ್ವ ಶಂಕಿತ ಉಗ್ರನನ್ನು ಬಂಧಿಸಿದ ಕುರಿತು ವರದಿಯಾಗಿದೆ.
ಬಂಧಿತ ಶಂಕಿತ ಉಗ್ರನನ್ನು ಅಝೀಝ್ ಅಹ್ಮದ್ ಎಂದು ಗುರುತಿಸಲಾಗಿದೆ. ವಿಮಾನ ನಿಲ್ದಾಣದ ಎಮಿಗ್ರೇಷನ್ ಅಧಿಕಾರಿಗಳು ನೀಡಿದ ಮಾಹಿತಿಯ ಮೇರೆಗೆ ಶಂಕಿತ ಉಗ್ರನನ್ನು ಎನ್ ಐಎ ಅಧಿಕಾರಿಗಳು ಬಂಧಿಸಿರುವುದಾಗಿ ತಿಳಿದುಬಂದಿದೆ.