ಫೀಲ್ಡಿಂಗ್ ವೇಳೆ ಸೂರ್ಯಕುಮಾರ್ ಯಾದವ್ ಕೈಗೆ ಗಾಯ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 31. ಭಾರತ ಕ್ರಿಕೆಟ್ ತಂಡದ ಆಟಗಾರ ಸೂರ್ಯಕುಮಾರ್ ಯಾದವ್ ಅವರು ತಮಿಳುನಾಡು ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವ ವೇಳೆ ಕೈಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಪಂದ್ಯದ ಮುನ್ನವೇ ಸೂರ್ಯಕುಮಾರ್ ಯಾದವ್ ಅವರ ಕೈಗೆ ಗಾಯವಾಗಿದೆ. ಜೊತೆಗೆ ಸೆ. 05 ರಿಂದ ನಡೆಯಲಿರುವ ದುಲೀಪ್ ಟ್ರೋಫಿಯಲ್ಲೂ ಅವರ ಹೆಸರಿದೆ. ಇನ್ನು ಸೂರ್ಯಕುಮಾರ್ ಯಾದವ್ ಅವರ ಕೈ ಗಾಯವಾಗಿರುವ ಬಗ್ಗೆ ಈವರೆಗೂ ಬಿಸಿಸಿಐ ಯಾವುದೇ ಮಾಹಿತಿಯನ್ನೂ ನೀಡಿಲ್ಲ.

Scroll to Top